ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಹೊರಗುತ್ತಿಗೆ ನೇಮಕ ಸಲ್ಲ: ಹೈಕೋರ್ಟ್‌

Last Updated 30 ಜುಲೈ 2022, 19:33 IST
ಅಕ್ಷರ ಗಾತ್ರ

ಬೆಂಗಳೂರು: ‘ಸರ್ಕಾರಿ ವಸತಿ ಶಾಲೆಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ಪ್ರಕಾರವೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಬೇಕು, ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಬಾರದು‘ ಎಂದು ಹೈಕೋರ್ಟ್‌ ಸರ್ಕಾರಕ್ಕೆ ಆದೇಶಿಸಿದೆ.

ತಮ್ಮ ಹುದ್ದೆಗಳನ್ನು ಕಾಯಂಗೊಳಿಸುವಂತೆ ಕೋರಿ ಹೊರಗುತ್ತಿಗೆ ಏಜೆನ್ಸಿ ಮೂಲಕ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ಆರ್‌.ಅಶ್ವಿನಿರಾಜ್‌ ಮತ್ತಿತರರು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಲೇವಾರಿ ಮಾಡಿದ್ದು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ ಟೆಂಡರ್‌ ಕರೆದು ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ವಸತಿ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸುವ ಪದ್ಧತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

‘ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ನೇಮಕಗೊಂಡ ಶಿಕ್ಷಕರು ತಮ್ಮ ತಿಂಗಳ ಸಂಬಳದ ಒಂದು ಭಾಗವನ್ನು ಏಜೆನ್ಸಿಗೆ ಪಾವತಿಸುವ ಕ್ರಮ ಎಷ್ಟರಮಟ್ಟಿಗೆ ಸರಿ’ ಎಂದು ಪ್ರಶ್ನಿಸಿರುವ ನ್ಯಾಯಪೀಠ, ‘ಹೊರಗುತ್ತಿಗೆ ಬೋಧನಾ ಸಿಬ್ಬಂದಿಗೆ ಪಾವತಿಸಬೇಕಾದ ಸಂಬಳದಿಂದ ತಿಂಗಳ ಸೇವಾ ಶುಲ್ಕ ಕಡಿತಗೊಳಿಸುತ್ತಿರುವುದೂ ಸಮಂಜಸವಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ‘ಸರ್ಕಾರ ಅಂತಹ ಶಿಕ್ಷಕರಿಗೆ ಸೇವಾ ಭದ್ರತೆ ನೀಡಲು ಗಂಭೀರ ಕ್ರಮ ಕೈಗೊಳ್ಳಬೇಕು’ ಎಂದು ತಾಕೀತು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT