ಬೆಂಗಳೂರು: ‘ಗಣಿ ಗುತ್ತಿಗೆ ಪರವಾನಗಿಯನ್ನು ಅಕ್ರಮವಾಗಿ ನೀಡಿದ ಹಾಗೂ ಕಾನೂನು ಬಾಹಿರವಾಗಿ ನವೀಕರಣ ಮಾಡಿದ ಆರೋಪದಡಿ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಆದೇಶಿಸಬೇಕು’ ಎಂದು ಕೋರಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್, ಏಪ್ರಿಲ್ 17ಕ್ಕೆ ಮುಂದೂಡಿದೆ.

ಈ ಸಂಬಂಧ ನಗರದ ಉದ್ಯಮಿ ಎಂ.ಪಿ.ವೇಣುಗೋಪಾಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸಿದ್ದರಾಮಯ್ಯ ಪರ ಹಾಜರಾಗಿದ್ದ ಪದಾಂಕಿತ ಹಿರಿಯ ವಕೀಲ ಕೆ.ಶಶಿಕಿರಣ ಶೆಟ್ಟಿ, ‘ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ರಾಮಮೂರ್ತಿ ಗೌಡ ಎಂಬುವರು ಖಾಸಗಿ ದೂರು (ಪಿಸಿಆರ್) ಸಲ್ಲಿಸಿದ್ದರು. ಆ ಖಾಸಗಿ ದೂರಿನಲ್ಲಿದ್ದ ವಿಷಯ ಮತ್ತು ಅಂಶಗಳನ್ನೇ ಪುಟ ಸಂಖ್ಯೆಗಳ ಸಮೇತ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲೂ ನಕಲು ಮಾಡಲಾಗಿದೆ. ಖಾಸಗಿ ದೂರಿನಲ್ಲಿಯೂ ಸಿದ್ದರಾಮಯ್ಯ ಸೇರಿದಂತೆ ಹಾಲಿ ಪಿಐಎಲ್ನಲ್ಲಿರುವ ಎಲ್ಲರನ್ನೂ ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಖಾಸಗಿ ದೂರಿನ ಅಂಶಗಳನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ನಕಲು ಮಾಡಲಾಗಿದೆ ಎಂದು ಸಿದ್ದರಾಮಯ್ಯ ಪರ ವಕೀಲರು ಹೇಳುತ್ತಿದ್ದಾರೆ. ಆದ್ದರಿಂದ, ಖಾಸಗಿ ದೂರಿನ ಬಗ್ಗೆ ಸ್ಪಷ್ಟನೆ ನೀಡಿ’ ಎಂದು ಅರ್ಜಿದಾರರ ಪರ ವಕೀಲರಿಗೆ ನಿರ್ದೇಶಿಸಿ ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿತು. ‘ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನಿರ್ದೇಶನ ನೀಡಬೇಕು’ ಎಂದೂ ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.