ಬೆಂಗಳೂರು: ದೋಷಾರೋಪ ಪಟ್ಟಿಯನ್ನೇ "ದೋಷಪೂರಿತ"ವಾಗಿ ತಯಾರಿಸಿ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ ಬಾಣಸವಾಡಿ ಠಾಣೆಯ ಇನ್ ಸ್ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ.

"ನನ್ನ ವಿರುದ್ಧ ನಗರದ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿರುವ ಪ್ರಕರಣ ರದ್ದುಪಡಿಸಬೇಕು" ಎಂದು ಕೋರಿ ಆರ್.ಎಸ್. ಪಾಳ್ಯದ 29 ವರ್ಷದ ಯುವಕ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

"ಆತ್ಮಹತ್ಯೆಗೆ ಪ್ರಚೋದನೆ (abetment) ನೀಡಿದ ಎಂಬ ಕಾರಣವನ್ನು ನಮೂದು ಮಾಡುವಾಗ ಅಲ್ಲಿ ಸಂತ್ರಸ್ತೆ ಅಥವಾ ಸಂತ್ರಸ್ತ ಮೃತಪಟ್ಟಿರಬೇಕು. ಸಂತ್ರಸ್ತರು ಜೀವಂತ ಇದ್ದಾಗಾಲೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಡಿ, ದೋಷಾರೋಪ ಪಟ್ಟಿ ಸಲ್ಲಿಸಲು ಸಾಧ್ಯವಿಲ್ಲ" ಎಂದು ನ್ಯಾಯಪೀಠ ವಿಶದಪಡಿಸಿದೆ.

"ಈ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ ಅರ್ಜಿದಾರರ ಪತ್ನಿಯು ಬದುಕಿರುವಾಗ ತನಿಖಾಧಿಕಾರಿ ಮೂಲ ತತ್ವವನ್ನೇ ಮರೆತು ಕಲಂ 108ರ (ಪ್ರಚೋದನೆಯಿಂದ ಆತ್ಮಹತ್ಯೆ) ಅಡಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿರುವುದು ಮೂರ್ಖತನ" ಎಂದು ಕಿಡಿ ಕಾರಿದೆ.

"ಅಜಾಗರೂಕತೆ ಅಥವಾ ಕಾನೂನು ಕ್ರಮ ಕೈಗೊಳ್ಳುವ ಆತುರದಲ್ಲಿ, ಅರ್ಜಿದಾರರನ್ನು ಬಂಧಿಸಿ ಇಡಲಾಗಿದೆ. ಇದು ತನಿಖೆಯ ಅವಿವೇಕ ಮತ್ತು ವ್ಯಕ್ತಿಯೊಬ್ಬರ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಆಳವಾದ ಅಸಡ್ಡೆ ಹೊಂದಿರುವುದನ್ನು ಪ್ರತಿಬಿಂಬಿಸುತ್ತದೆ" ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

"ತನಿಖಾಧಿಕಾರಿಯ (ಇನ್ ಸ್ಪೆಕ್ಟರ್) ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರುವ ಈ ಪ್ರಕರಣ ನ್ಯಾಯಾಂಗದ ಮನಃಸ್ಸಾಕ್ಷಿಗೆ ಆಘಾತ ಉಂಟು ಮಾಡಿದೆ. ಪ್ರಾಸಿಕ್ಯೂಷನ್ ತುಳಿದಿರುವ ತಪ್ಪು ಹಾದಿಯಿಂದಾಗಿ ಅರ್ಜಿದಾರರು ಆರು ತಿಂಗಳಿಗೂ ಹೆಚ್ಚು ಕಾಲ ಜೈಲಿನ ಕಂಬಿಗಳ ಹಿಂದೆ ನರಳುವಂತಾಗಿದೆ. ಈ ಕೂಡಲೇ ಅರ್ಜಿದಾರರನ್ನು ಜೈಲಿನಿಂದ ಬಿಡುಗಡೆ ಮಾಡಬೇಕು" ಎಂದು ಸಕ್ಷಮ ಪ್ರಾಧಿಕಾರಕ್ಕೆ ಆದೇಶಿಸಿದೆ.

ಅಂತೆಯೇ, "ಅರ್ಜಿದಾರ ಪತಿ ಮತ್ತು ದೂರುದಾರ ಪತ್ನಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವ ನಿರ್ಧಾರವನ್ನು ಮನ್ನಿಸಲಾಗಿದೆ" ಎಂದು ನ್ಯಾಯಪೀಠ ಹೇಳಿದೆ.

ವರದಿ ಸಲ್ಲಿಸಿ: "ತಪ್ಪಿತಸ್ಥ ಪೊಲೀಸ್ ಅಧಿಕಾರಿಯ ವಿರುದ್ಧದ ಇಲಾಖಾ ವಿಚಾರಣೆಯ ವರದಿಯನ್ನು ಮೂರು ತಿಂಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು" ಎಂದು ಪ್ರಾಸಿಕ್ಯೂಷನ್ ಗೆ ನಿರ್ದೇಶಿಸಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಆರ್.ರಂಗನಾಥ ರಡ್ಡಿ ವಾದ ಮಂಡಿಸಿದ್ದರು.

ಪ್ರಕರಣ: ಅರ್ಜಿದಾರ ಯುವಕ ಮತ್ತು ಪ್ರಕರಣದ ದೂರುದಾರ ಯುವತಿ ಪರಸ್ಪರ ಪ್ರೀತಿಸಿ 2018ರ ಅಕ್ಟೋಬರ್ ನಲ್ಲಿ ಮದುವೆಯಾಗಿದ್ದು ಒಂದು ವರ್ಷದ ಹೆಣ್ಣು ಮಗುವಿದೆ.

ಕಳೆದ ವರ್ಷ ಪತಿ-ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಕೌಟುಂಬಿಕ ಜಗಳ ನಡೆದಿತ್ತು. ಮಾತಿನ ಭರದಲ್ಲಿ ಪತ್ನಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮನೆಯ ಎರಡನೆಯ ಮಹಡಿಯಿಂದ ಕೆಳಗೆ ಜಿಗಿದಿದ್ದರು. ಪರಿಣಾಮ ಬೆನ್ನುಮೂಳೆ ಮತ್ತು ಕೈ ಮುರಿದಿತ್ತು. ನಂತರ ಸಂಪೂರ್ಣ ಚೇತರಿಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಪತ್ನಿಯು ಪತಿಯ ವಿರುದ್ಧ ದೂರು ನೀಡಿದ್ದರು. ಪೊಲೀಸರು, ಭಾರತೀಯ ನ್ಯಾಯ ಸಂಹಿತೆ-2023ರ (ಬಿಎನ್ಎಸ್) ಕಲಂ 108, 62, 85 ಮತ್ತು 352ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ನಂತರ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.