ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡ ಜಂಗಮ‌ ಜಾತಿ ಪ್ರಮಾಣ ಪತ್ರ ಬಳಕೆ: ದಾರಕೇಶ್ವರಯ್ಯಗೆ ಹೈಕೋರ್ಟ್ ನಿರ್ಬಂಧ

Published 8 ಏಪ್ರಿಲ್ 2024, 23:25 IST
Last Updated 8 ಏಪ್ರಿಲ್ 2024, 23:25 IST
ಅಕ್ಷರ ಗಾತ್ರ

ಬೆಂಗಳೂರು: ಬೇಡ ಜಂಗಮ ಜಾತಿ ಪ್ರಮಾಣಪತ್ರ ಬಳಸಿಕೊಂಡು ಪರಿಶಿಷ್ಟ ಜಾತಿಗೆ ಮೀಸಲಾದ ಚಿತ್ರದುರ್ಗ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಖಾಸಾ ಅಣ್ಣ ಎಂ.ಪಿ.ದಾರಕೇಶ್ವರಯ್ಯ ಅವರ ಪ್ರಯತ್ನಕ್ಕೆ ಹೈಕೋರ್ಟ್ ತಡೆ ಒಡ್ಡಿದೆ.

ಈ ಸಂಬಂಧ ದಾಸರಹಳ್ಳಿಯ ಎಂ.ಚಂದ್ರ ಬಿನ್ ಮುನಿಯಪ್ಪ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲೆ ಕಾವ್ಯಶ್ರೀ, ‘ದಾರಕೇಶ್ವರಯ್ಯ ಈ ಮೊದಲು ಬೆಂಗಳೂರು ಉತ್ತರ ತಹಶೀಲ್ದಾರ್ ಅವರಿಂದ ಪಡೆದ ಬೇಡ ಜಂಗಮ ಜಾತಿ ಪ್ರಮಾಣಪತ್ರ ರದ್ದಾಗಿತ್ತು. ಈಗ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಅವರಿಂದ ಇದೇ ರೀತಿಯ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಇದು ಸಂಪೂರ್ಣ ಕಾನೂನುಬಾಹಿರ ಮತ್ತು ದುರ್ಬಳಕೆ’ ಎಂದು ಆಕ್ಷೇಪಿಸಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಮುಂದಿನ‌ ವಿಚಾರಣೆವರೆಗೂ ಬೇಡ ಜಂಗಮ ಜಾತಿ ಪ್ರಮಾಣಪತ್ರವನ್ನು ಬಳಸದಂತೆ ದಾರಕೇಶ್ವರಯ್ಯ ಅವರಿಗೆ ನಿರ್ಬಂಧ ವಿಧಿಸಿ ಆದೇಶಿಸಿತು.

ಪ್ರತಿವಾದಿಗಳಾದ ಬೆಂಗಳೂರು ನಗರ ಜಿಲ್ಲಾಧಿಕಾರಿ, ಬೆಂಗಳೂರು ಉತ್ತರ ತಾಲ್ಲೂಕು ತಹಶೀಲ್ದಾರ್ ಮತ್ತು ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್ ಪರವಾಗಿ ಹಿರಿಯ ವಕೀಲ ಸಿ.ಜಗದೀಶ್ ಅವರು ನೋಟಿಸ್ ಪಡೆಯಲು ನ್ಯಾಯಪೀಠ ಆದೇಶಿಸಿತು.

ವಿಚಾರಣೆಯನ್ನು ಇದೇ 10ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT