‘ಇತ್ತೀಚಿನ ಲೋಕಸಭೆ ಚುನಾವಣಾ ರ್‍ಯಾಲಿ ಸಂದರ್ಭದಲ್ಲಿ ಯತ್ನಾಳ್ ನನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಶಿವಾನಂದಪಾಟೀಲ್ ಅವರು, ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದನ್ನು ವಿಚಾರಣೆಗೆ ಪರಿಗಣಿಸಿದ್ದ ವಿಚಾರಣಾ ನ್ಯಾಯಾಲಯ ಯತ್ನಾಳ್ ಅವರಿಗೆ ಷೋಕಾಸ್ ನೋಟಿಸ್ ಜಾರಿಗೊಳಿಸುವಂತೆ 2024ರ ಜುಲೈ 16ರಂದು ಆದೇಶಿಸಿತ್ತು.