ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾದಾವರ ಗ್ರಾಮದಲ್ಲಿ ಗೋವಿಂದಪ್ಪ ಅವರ ಮನೆಯಲ್ಲಿ ಚುನಾವಣಾ ಅಧಿಕಾರಿಗಳು ₹4.8 ಕೋಟಿ ಜಪ್ತಿ ಮಾಡಿದ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿ ಸೇರಿದಂತೆ ಎಲ್ಲ ವಿಚಾರಣಾ ಪ್ರಕ್ರಿಯೆಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

‘ನನ್ನ ವಿರುದ್ಧದ ದೋಷಾರೋಪ ಪಟ್ಟಿ ಹಾಗೂ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಡಾ.ಕೆ.ಸುಧಾಕರ್ ಹಾಗೂ ಗೋವಿಂದಪ್ಪ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದರು.

ಸುಧಾಕರ್ ಹಾಗೂ ಗೋವಿಂದಪ್ಪ ಅವರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸರು ನೆಲಮಂಗಲ ಜೆಎಂಎಫ್ಸಿ ಕೋರ್ಟ್ಗೆ ಸಲ್ಲಿಸಿರುವ ದೋಷಾರೋಪ ಪಟ್ಟಿ ಮತ್ತು ಅದರನ್ವಯ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿದರು. ಸುಧಾಕರ್ ಪರ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ ಹಾಗೂ ಬಿ.ಎಲ್.ಆಚಾರ್ಯ ಮತ್ತು ಗೋವಿಂದಪ್ಪ ಪರ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.