ಬೆಂಗಳೂರು: ತುಮಕೂರು ಶಾಖಾ ನಾಲೆಯಲ್ಲಿ ಹರಿಯುವ ಹೇಮಾವತಿ ನದಿ ನೀರನ್ನು ಕೆರೆಗಳಿಗೆ ಹರಿಸುವ ಸರ್ಕಾರದ ನಿರ್ಧಾರ ಆಕ್ಷೇಪಿಸಿ ನಾಲೆಯ ತೂಬಿಗೆ ಹಾಕಿದ್ದ ಬೀಗ ಒಡೆದು ಹಾಕಿ ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ ಆರೋಪದಡಿ ಹಿರಿಯ ವಕೀಲ ಎಚ್.ಎಂ.ಅನಂತ ಕುಮಾರಯ್ಯ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ತುಮಕೂರು 1ನೇ ಹೆಚ್ಚುವರಿ ಸಿವಿಲ್ (ಕಿರಿಯ ಶ್ರೇಣಿಯ) ಮತ್ತು ಜೆಎಂಎಫ್ಸಿ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಅನಂತ ಕುಮಾರಯ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

‘ಸಾರ್ವಜನಿಕರು ಪ್ರತಿಭಟನೆ ನಡೆಸಿದರೆ ಮತ್ತು ಸರ್ಕಾರದ ಲೋಪವನ್ನು ಎತ್ತಿ ತೋರಿಸಿದರೆ ನಿಮಗೆ ಸಮಸ್ಯೆಯೇ’ ಎಂದು ಪ್ರಾಸಿಕ್ಯೂಷನ್ ವಿರುದ್ಧ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.

ಪ್ರಕರಣವೇನು?:

ತುಮಕೂರಿನ ಅದ್ಲಾಪುರ, ಹಾಲನೂರು ಗ್ರಾಮಗಳಲ್ಲಿ ಹೇಮಾವತಿ ನಾಲೆಯಲ್ಲಿ ಹರಿಯುವ ನೀರನ್ನು ಕುಡಿಯುವ ನೀರಿನ ಯೋಜನೆಗಾಗಿ ಗೂಳೂರು - ಹೆಬ್ಬೂರು, ಸಿ.ಎಸ್.ಪುರ, ಅರಿಯೂರು ಕೆರೆಗಳಿಗೆ ಹರಿಸಲು ಸರ್ಕಾರ ನಿರ್ಧರಿಸಿತ್ತು. ಇದನ್ನು ಆಕ್ಷೇಪಿಸಿ ಅರ್ಜಿದಾರರು ಪ್ರತಿಭಟನೆ ನಡೆಸಿದ್ದರು.

‘ಅರ್ಜಿದಾರರು ನಿಷೇಧಾಜ್ಞೆ ಉಲ್ಲಂಘಿಸಿ 2019ರ ಸೆಪ್ಟೆಂಬರ್ 10ರಂದು ಬೆಳಗ್ಗೆ 10 ಗಂಟೆಗೆ ಗುಂಪುಗೂಡಿ ಹೇಮಾವತಿ ನಾಲೆ-22ರ ತೂಬಿಗೆ ಹಾಕಲಾಗಿದ್ದ ಬೀಗ ಒಡೆದು ಹಾಕಿ ಸರ್ಕಾರಕ್ಕೆ ₹50 ಸಾವಿರದಷ್ಟು ನಷ್ಟ ಉಂಟು ಮಾಡಿದ್ದಾರೆ. ನೀರನ್ನು ಅನಧಿಕೃತವಾಗಿ ಹಾಲನೂರು ಕರೆಗೆ ಬಿಟ್ಟಿದ್ದಾರೆ’ ಎಂದು ಆರೋಪಿಸಿ ತುಮಕೂರು ಗ್ರಾಮಾಂತರ ಠಾಣಾ ಪೊಲೀಸರು ದೂರು ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.