ಬೆಂಗಳೂರು: ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಅತಿಕ್ರಮ ಪ್ರವೇಶ ಮಾಡಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಿರುತೆರೆ ನಿರ್ದೇಶಕ ಟಿ.ಎನ್.ಸೀತಾರಾಮ್ ಮತ್ತು ಇತರರ ವಿರುದ್ಧ ದಾಖಲಿಸಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಪ್ರಕರಣ ರದ್ದುಕೋರಿ ಟಿ.ಎನ್.ಸೀತಾರಾಮ್ ಮತ್ತು ಅವರ ಸಹೋದರಿ ಕೆ.ಎಸ್.ವಿಜಯಲಕ್ಷ್ಮಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸೀತಾರಾಮ್ ಪರ ಪದಾಂಕಿತ ಹಿರಿಯ ವಕೀಲ ಕೆ.ದಿವಾಕರ ಅವರು, ‘ಅರ್ಜಿದಾರರು ವಕೀಲರು ಮತ್ತು ಖ್ಯಾತ ಕಿರುತೆರೆ ನಿರ್ದೇಶಕರು. ಅವರಿಗೆ ಸಂಬಂಧಿಸಿದ ಆಸ್ತಿ ವಿಚಾರದಲ್ಲಿ ಈ ಸುಳ್ಳು ದೂರು ದಾಖಲಾಗಿದ್ದು ಇದಕ್ಕೆ ತಡೆ ನೀಡಬೇಕು’ ಎಂದು ಕೋರಿದರು.

ಇದಕ್ಕೆ ದೂರುದಾರ ಎಂ.ಎ.ಅರವಿಂದ ಕುಮಾರ್ ಪರ ಹಾಜರಾಗಿದ್ದ ಹೈಕೋರ್ಟ್ ವಕೀಲ ಜೆ.ಆರ್.ಜಗದೀಶ್ ಆಕ್ಷೇಪ ವ್ಯಕ್ತಪಡಿಸಿದರಾದರೂ, ನ್ಯಾಯಪೀಠ ಸೀತಾರಾಮ್ ಮತ್ತು ಇತರರ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ತಡೆ ನೀಡಿ ಆದೇಶಿಸಿತು.

ಪ್ರಕರಣವೇನು?

ದೊಡ್ಡಬಳ್ಳಾಪುರ ತಾಲ್ಲೂಕಿನ ಹಸನಘಟ್ಟ ಗ್ರಾಮದ ವಿವಿಧ ಸರ್ವೇ ನಂಬರ್ಗಳಲ್ಲಿನ ಒಟ್ಟು 5 ಎಕರೆಗೂ ಹೆಚ್ಚು ವಿಸ್ತೀರ್ಣದ ಜಮೀನಿನಲ್ಲಿ ಒಂದಷ್ಟು ಭಾಗ ತಮ್ಮ ಹೆಸರಿಗೆ ಇದೆ’ ಎಂಬ ಟಿ.ಎನ್.ಸೀತಾರಾಮ್ ಅವರ ದಾವೆಗೆ ಸಂಬಂಧಿಸಿದಂತೆ ಎಂ.ಎ.ಅರವಿಂದ ಕುಮಾರ್ ಮತ್ತು ಸೀತಾರಾಮ್ ನಡುವೆ ತಕರಾರು ನಡೆದಿದೆ.

ಈ ಸಂಬಂಧ ಎಂ.ಎ.ಅರವಿಂದ ಕುಮಾರ್ ಅವರು, ಟಿ.ಎನ್.ಸೀತಾರಾಮ್, ಕೆ.ಎಸ್.ವಿಜಯಲಕ್ಷ್ಮಿ, ರಾಕೇಶ್ ಮತ್ತು ಶಶಾಂಕ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ದೂರಿನ ಅನ್ವಯ ನಾಲ್ವರೂ ಆರೋಪಿಗಳ ವಿರುದ್ಧ ವಿವಿಧ ಕಲಂಗಳ ಅಡಿ ಎಫ್ಐಆರ್ ದಾಖಲಿಸಲಾಗಿದೆ. ‘ಈ ಕುರಿತಾದ ತನಿಖೆಯನ್ನು ರದ್ದುಪಡಿಸಬೇಕು’ ಎಂದು ಕೋರಿ ಸೀತಾರಾಮ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.