ಪ್ರಕರಣವೇನು?
‘ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಗಳು ಕೇತಗಾನಹಳ್ಳಿಯ ಸರ್ವೇ ನಂಬರ್ 8, 9, 10, 16, 17 ಮತ್ತು 79ರಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯ ಅನುಸಾರ ಕ್ರಮ ಕೈಗೊಳ್ಳಬೇಕು ಎಂದು 2020ರಲ್ಲಿ ಹೈಕೋರ್ಟ್ ಆದೇಶಿಸಿತ್ತು. ಆದರೆ, ಇದನ್ನು ಜಾರಿಗೊಳಿಸಿಲ್ಲ’ ಎಂದು ಸಮಾಜ ಪರಿವರ್ತನಾ ಸಮುದಾಯ, ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ನಲ್ಲಿ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಿ 2025ರ ಜನವರಿ 28ರಂದು ಆದೇಶಿಸಲಾಗಿದೆ.