ಬೆಂಗಳೂರು: ಬಿಸಿಲಿನ ತಾಪ ಹೆಚ್ಚಿರುವ ಹಿನ್ನೆಲೆಯಲ್ಲಿ ಇದೇ 6ರಿಂದ ಮೇ ಅಂತ್ಯದವರಗೆ ಹೈಕೋರ್ಟ್ ಕಲಬುರಗಿ ಪೀಠಗಳ ಕಾರ್ಯ ಕಲಾಪದ ಸಮಯ ಬದಲಾವಣೆ ಮಾಡಲಾಗಿದೆ.

ಈ ಕುರಿತಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಆದೇಶಕ್ಕೆ ಅನುಗುಣವಾಗಿ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.

ಕಲಬುರಗಿ ಹೈಕೋರ್ಟ್ ಪೀಠದ ಕಲಾಪವು ಇದೇ 6ರಿಂದ ಮೇ ಅಂತ್ಯದವರೆಗೆ ನಿತ್ಯ ಬೆಳಿಗ್ಗೆ 8 ರಿಂದ 11 ಗಂಟೆ, ನಂತರ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.

ಬೆಳಿಗ್ಗೆ 11 ರಿಂದ 11.30ರವರೆಗೆ ವಿರಾಮ ಇರಲಿದೆ. ಕಚೇರಿ ಸಮಯ ಶನಿವಾರವನ್ನು ಹೊರತುಪಡಿಸಿ ಬೆಳಿಗ್ಗೆ 7.30ರಿಂದ ಮಧ್ಯಾಹ್ನ 2ಗಂಟೆಯವರೆಗೆ ಕಾರ್ಯ ನಿರ್ವಹಿಸಲಿದೆ. ಶನಿವಾರ ಬೆಳಿಗ್ಗೆ 7.30 ರಿಂದ 11 ಗಂಟೆಯವರೆಗೆ ಕಚೇರಿ ಕಾರ್ಯ ನಿರ್ವಹಿಸಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕಲಬುರಗಿ ವಿಭಾಗ ವ್ಯಾಪ್ತಿಯ ಬಳ್ಳಾರಿ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯನಗರ, ಯಾದಗಿರಿ ಮತ್ತು ಬೆಳಗಾವಿ ವ್ಯಾಪ್ತಿಗೆ ಒಳಪಡುವ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸಿವಿಲ್, ಕ್ರಿಮಿನಲ್, ಕೌಟುಂಬಿಕ ಮತ್ತು ಕಾರ್ಮಿಕ ನ್ಯಾಯಾಲಯಗಳ ಕಲಾಪದ ಸಮಯವನ್ನೂ ಇದೇ 4 ರಿಂದ ಮೇ ಅಂತ್ಯದವರೆಗೆ ಬದಲಿಸಲಾಗಿದೆ.

ಈ ನ್ಯಾಯಾಲಯಗಳ ಕಲಾಪವು ಇದೇ 4 ರಿಂದ ಬೆಳಿಗ್ಗೆ 8 ರಿಂದ 11 ಮತ್ತು 11.30 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ. ಮಧ್ಯಾಹ್ನ 11ರಿಂದ 1.30ರವರೆಗೆ ವಿರಾಮ ಇರಲಿದೆ. ಕಚೇರಿ ಸಮಯವು ಬೆಳಿಗ್ಗೆ 7.30ಕ್ಕೆ ಆರಂಭವಾಗಿ ಮಧ್ಯಾಹ್ನ 2ಕ್ಕೆ ಕೊನೆಯಾಗಲಿದೆ. ಇದೇ 24ರಂದು ನಾಲ್ಕನೇ ಶನಿವಾರ ಬೆಳಿಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನ್ಯಾಯಾಲಯಗಳು ಕಾರ್ಯ ನಿರ್ವಹಿಸಲಿವೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.