ಕಲಬುರಗಿ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಆರೋಪಿಯಾದ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್‌ಗೆ ಪೊಲೀಸರು ಎರಡನೇ ನೋಟಿಸ್ ನೀಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜಾತಿ ನಿಂದನೆ ಮಾಡಿ ಹಾಗೂ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರು ಆಗುವಂತೆ ಎರಡು ದಿನಗಳ ಹಿಂದೆಯೇ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಗೈರಾಗಿದ್ದರಿಂದ ಮತ್ತೊಂದು ನೋಟಿಸ್ ಹೊರಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.