ಬೆಂಗಳೂರು: ನಕಲಿ ದಾಖಲೆ ಸಲ್ಲಿಸಿ ಚಾಲಕನ ಹುದ್ದೆ ಪಡೆದುಕೊಂಡಿದ್ದ ಆರೋಪದಡಿ ನೌಕರರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

‘ನಕಲಿ ದಾಖಲೆ ಸಲ್ಲಿಸಿ ಚಾಲಕ ಹುದ್ದೆಗೆ 1988ರಲ್ಲಿ ಸೇರ್ಪಡೆಗೊಂಡಿದ್ದ ಬೆಂಗಳೂರು ಪೂರ್ವ ತಾಲ್ಲೂಕಿನ ದೊಡ್ಡಗುಬ್ಬಿ ಬಳಿಯ ಯರಪ್ಪನಹಳ್ಳಿ ನಿವಾಸಿ ಮಾಲೂರಪ್ಪ ಅವರನ್ನು ವಜಾಗೊಳಿಸಿರುವ ಬಿಎಂಟಿಸಿ ಕ್ರಮದಲ್ಲಿ ಯಾವುದೇ ದೋಷವಿಲ್ಲ’ ಎಂದು ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಎತ್ತಿಹಿಡಿದಿದೆ.

ಪ್ರಕರಣವೇನು?: ಬದಲಿ ಚಾಲಕನ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿಯವರೆಗೆ ಶಿಕ್ಷಣ ಪಡೆದಿರಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಆದರೆ 1ನೇ ತರಗತಿಯವರೆಗೆ ಮಾತ್ರ ಅಧ್ಯಯನ ಮಾಡಿದ್ದ ಮಾಲೂರಪ್ಪ, ತಾವು 9ನೇ ತರಗತಿ ಅಧ್ಯಯನ ಮಾಡಿರುವುದಾಗಿ 1990ರಲ್ಲಿ ನಕಲಿ ಶಾಲಾ ವರ್ಗಾವಣೆ ಪ್ರಮಾಣಪತ್ರ (ಟಿಸಿ) ಸಲ್ಲಿಸಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಅವರ ವಿರುದ್ಧ ಇಲಾಖಾ ವಿಚಾರಣೆ ಆರಂಭಿಸಿತ್ತು.

ಒಂದು ದಶಕಕ್ಕೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದ ಬಿಎಂಟಿಸಿ 2002ರಲ್ಲಿ ಪೂರ್ಣಗೊಳಿಸಿತ್ತು. ನಂತರ 2005ರಲ್ಲಿ ಮಾಲೂರಪ್ಪ ಅವರನ್ನು ಸೇವೆಯಿಂದ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮಾಲೂರಪ್ಪ ಕಾರ್ಮಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇದಾದ 11 ವರ್ಷಗಳ ಬಳಿಕ ಕಾರ್ಮಿಕ ನ್ಯಾಯಾಲಯ, ‘ಅರ್ಜಿದಾರರು ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಅವರನ್ನು ಸೇವೆಯಿಂದ ವಜಾಗೊಳಿಸುವುದು ಕಠಿಣ ಕ್ರಮ ಎನಿಸುತ್ತದೆ. ಹೀಗಾಗಿ, ಯಾವುದೇ ಹಿಂಬಾಕಿ ಪಾವತಿ ಮಾಡದೆ, ಮೂರು ವರ್ಷಗಳ ಕಾಲ ವೇತನ ಹೆಚ್ಚಳ ಮಾಡದೆ ಸೇವೆಯಲ್ಲಿ ಮುಂದುವರೆಸಿ’ ಎಂದು ನಿರ್ದೇಶಿಸಿತ್ತು.

ಕಾರ್ಮಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಎಂಟಿಸಿ 2017ರಲ್ಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ಕಾರ್ಮಿಕ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿತ್ತು. ಮಾಲೂರಪ್ಪ ಅವರನ್ನು ವಜಾಗೊಳಿಸಿದ್ದ ಬಿಎಂಟಿಸಿ ಕ್ರಮವನ್ನು ಎತ್ತಿಹಿಡಿದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.