ಬೆಂಗಳೂರು: ರಾಜ್ಯದ ಎಲ್ಲಾ 215 ಕೈಗಾರಿಕಾ ಪ್ರದೇಶಗಳಲ್ಲಿನ ಕೈಗಾರಿಕೆಗಳಿಂದ ಆಗುತ್ತಿರುವ ಮಾಲಿನ್ಯ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ), ಭಾರತೀಯ ತಂತ್ರಜ್ಞಾನ ಸಂಸ್ಥೆಯಂತಹ (ಐಐಟಿ) ಉನ್ನತ ಮಟ್ಟದ ಸಂಸ್ಥೆಗಳಿಂದ ವಿಸ್ತೃತ ಅಧ್ಯಯನ ನಡೆಸಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಮಹೇಶ್, ತಾಂತ್ರಿಕ ಸಲಹೆಗಾರ ಡಾ.ಅರವಿಂದ ಗಲಗಲಿ ಸೇರಿದಂತೆ ಉನ್ನತ ಅಧಿಕಾರಿಗಳೊಂದಿಗೆ ಸೋಮವಾರ ಅವರು ಸಭೆ ನಡೆಸಿದರು.

‘ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯಮ ನಡೆಸಲು ಅನುಮತಿ ನೀಡುವಾಗ ಸರ್ಕಾರ ಹಲವು ಮಾನದಂಡ ನೀಡುತ್ತದೆ. ಆದರೆ, ನಂತರದ ದಿನಗಳಲ್ಲಿ ಏನಾಗುತ್ತದೆ ಎನ್ನುವುದರ ಪರಿಶೀಲನೆ ಅಗತ್ಯ. ಉದ್ಯಮಗಳನ್ನು ಬೆಳೆಸುವ ಜತೆಯಲ್ಲೇ ನೆಲ, ಜಲ, ವಾಯು, ಕೃಷಿ ಮತ್ತು ಮನುಷ್ಯರ ಮೇಲಾಗುತ್ತಿರುವ ಪರಿಣಾಮಗಳನ್ನೂ ಅಧ್ಯಯನ ಮಾಡಿ, ಅವುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’ ಎಂದು ಪಾಟೀಲ ಸೂಚಿಸಿದರು.

ಕೈಗಾರಿಕಾ ಮಾಲಿನ್ಯ ಕುರಿತು ಅಧ್ಯಯನಕ್ಕಾಗಿ ಸೂಕ್ತ ಸಂಸ್ಥೆಯನ್ನು ಗುರುತಿಸಬೇಕು. ನೇಮಕ ಮಾಡಿದ ಸಂಸ್ಥೆಯ ತಂಡಗಳು ಎಲ್ಲಾ ಕೈಗಾರಿಕಾ ಪ್ರದೇಶಗಳಿಗೂ ಭೇಟಿ ನೀಡಬೇಕು. ಕಾಲಮಿತಿಯ ಒಳಗೆ ವರದಿ ಸಲ್ಲಿಸಬೇಕು. ಮಾಲಿನ್ಯದ ತೀವ್ರತೆ ಆಧರಿಸಿ, ಆಯಾ ಉದ್ಯಮಗಳು ಯಾವ ಬಗೆಯ ಪರಿಹಾರ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂಬ ಸಲಹೆ ನೀಡಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.