ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚು ಅಂಕಗಳ ಪಟ್ಟಿಯೇ ಸಿಇಟಿಗೆ ಪರಿಗಣನೆ- ಕೆಇಎ

Published 13 ಏಪ್ರಿಲ್ 2024, 15:58 IST
Last Updated 13 ಏಪ್ರಿಲ್ 2024, 15:58 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯು ಮೂರೂ ಪರೀಕ್ಷೆಗಳನ್ನೂ ತೆಗೆದುಕೊಳ್ಳವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕಗಳನ್ನು ಪಡೆಯುತ್ತಾರೋ ಆ ಅಂಕಪಟ್ಟಿಯನ್ನೇ ಸಿಇಟಿಗೆ ಪರಿಗಣಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಮ್ಮತಿಸಿದೆ.

ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುತ್ತದೆ. ಇದುವರೆಗೂ ದ್ವಿತೀಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅನುತ್ತೀರ್ಣರಾದರೆ, ಪೂರಕ ಪರೀಕ್ಷೆ ತೆಗೆದುಕೊಂಡು ಮತ್ತೆ ಉಳಿದ ವಿಷಯಗಳಲ್ಲಿ ತೇರ್ಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಹಾಗೂ ಪೂರಕ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದ ಅಂಕಗಳನ್ನು ಕ್ರೋಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು. 

ಇದೇ ಮೊದಲ ಬಾರಿ ಮೂರು ವಾರ್ಷಿಕ ಪರೀಕ್ಷೆಗಳನ್ನು ಪರಿಚಯಿಸಲಾಗಿದ್ದು, ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಮೂರೂ ಪರೀಕ್ಷೆ ಬರೆಯಬಹುದು. ಯಾವ ಪರೀಕ್ಷೆಯಲ್ಲಿ, ಯಾವ ವಿಷಯದಲ್ಲಿ ಹೆಚ್ಚು ಅಂಕ ಬಂದಿರುತ್ತವೋ, ಅವುಗಳನ್ನೇ ಉಳಿಸಿಕೊಂಡು ಅಂತಿಮ ಅಂಕಪಟ್ಟಿ ಪಡೆಯಬಹುದು. ಅದೇ ಅಂಕಗಳನ್ನು ಪರೀಕ್ಷಾ ಪ್ರಾಧಿಕಾರ ಸಿಇಟಿ ಅಂಕಗಳ ಜತೆ ರ್‍ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರಿಗಣಿಸುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ಖಚಿತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT