ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭದ್ರತೆ ಹೆಚ್ಚಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇದೆ ಎಂಬ ಹೇಳಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಮಹಾನಿರ್ದೇಶಕರನ್ನು ಕರೆಸಿಕೊಂಡು ಚರ್ಚಿಸಿದ್ದು, ವಿರೋಧ ಪಕ್ಷದ ನಾಯಕರ ಭದ್ರತೆಯನ್ನು ತಕ್ಷಣವೇ ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದೇನೆ’ ಎಂದರು.

ಹಾವಿಗೆ ಹಾಲೆರೆಯುತ್ತಿದ್ದೀರಿ, ನಂತರದ ಸರದಿ ನಿಮ್ಮದಿರಬಹುದು: ಸಿಎಂಗೆ ಕಾಂಗ್ರೆಸ್

‘ಸಿದ್ದರಾಮಯ್ಯ ಅವರ ಜತೆಗೂ ದೂರವಾಣಿ ಮೂಲಕ ಚರ್ಚಿಸಿದ್ದೇನೆ. ಅವರಿಗೆ ಅಥವಾ ಅವರ ಸಿಬ್ಬಂದಿಗೆ ಬೆದರಿಕೆ ಕರೆ ಬಂದಿದ್ದರೆ ಅಂತಹ ಮಾಹಿತಿ ಹಂಚಿಕೊಳ್ಳುವಂತೆ ಮನವಿ ಮಾಡಿದ್ದೇನೆ. ಈ ವಿಷಯದ ಕುರಿತು ಸಮಗ್ರವಾಗಿ ತನಿಖೆ ನಡೆಸಲಾಗುವುದು’ ಎಂದು ತಿಳಿಸಿದರು.

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನವನ್ನು ಯಾರೇ ಮಾಡಿದರೂ ಕ್ರಮ ಕೈಗೊಳ್ಳಲಾಗುವುದು. ಈಗ ಎರಡೂ ಕಡೆಯಿಂದ ತಪ್ಪುಗಳು ಆಗುತ್ತಿವೆ. ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು. ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಎಲ್ಲ ಜಿಲ್ಲೆಗಳ ಎಸ್‌ಪಿಗಳಿಗೂ ನಿರ್ದೇಶನ ನೀಡುವಂತೆ ಡಿಜಿಪಿಯವರಿಗೆ ಸೂಚಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.