ಬೆಂಗಳೂರು: ಚಿತ್ರನಟರು ಮತ್ತು ಗಣ್ಯರು ಭಾಗಿಯಾಗಿರುವ ಆರೋಪದ ಡ್ರಗ್ಸ್ ಜಾಲದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಲು ನಿರ್ದೇಶನ ನೀಡಬೇಕು ಎಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ.

ವಕೀಲರಾದ ಗೀತಾ ಮಿಶ್ರ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ‘ಚಿತ್ರೋದ್ಯಮ ಮತ್ತು ರಾಜಕಾರಣಿಗಳ ಸಂಬಂಧಿಕರು ಚಾಲನೆ ಮಾಡುವ ಸಾಕಷ್ಟು ವಾಹನಗಳು ಅಪಘಾತಕ್ಕೆ ಈಡಾಗುತ್ತಿವೆ. ಡ್ರಗ್ಸ್ ಜಾಲದ ಬಗ್ಗೆ ಸಿಸಿಬಿ ಪೊಲೀಸರು ಉತ್ತಮವಾಗಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಕಿಂಗ್‌ಪಿನ್‌ಗಳನ್ನು ಬಂಧಿಸುತ್ತಿಲ್ಲ. ಹೀಗಾಗಿ ಎಸ್‌ಐಟಿ ರಚನೆ ಮಾಡಬೇಕು ಮತ್ತು ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ (ಎನ್‌ಐಎ) ವಹಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

‘ಅರ್ಜಿದಾರರು ಉಲ್ಲೇಖಿಸಿದ ರಸ್ತೆ ಅಪಘಾತ ಪ್ರಕರಣಗಳ ಬಗ್ಗೆ ಯಾವುದೇದಾಖಲೆ ಸಲ್ಲಿಸಿಲ್ಲ. ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸುವ ಮತ್ತು ಎಸ್‌ಐಟಿ ಸ್ಥಾಪಿಸುವ ವಿಷಯ ಪ್ರಸ್ತಾಪಿಸುವುದು ಸೂಕ್ತವಲ್ಲ’ ಎಂದು ಪೀಠ ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.