ಬೆಂಗಳೂರು: ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಕಾರಾಗೃಹಗಳಿಗೆ ನೀಡಿರುವ ಮಾರ್ಗದರ್ಶಿ ಸೂತ್ರಗಳನ್ನು (ಎಸ್ಒಪಿ) ಮಾರ್ಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಮೈಸೂರು ಜೈಲಿನಲ್ಲಿರುವಅಮೋಲ್ ಕಾಳೆ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ರೋಗ ಲಕ್ಷಣ ಹೊಂದಿರುವ ಕೈದಿಗಳಿಗೆ ಕಾರಾಗೃಹಗಳಲ್ಲಿ ಪ್ರತ್ಯೇಕ ಕೊಠಡಿಗಳಿಲ್ಲ. ಎಲ್ಲರನ್ನು ಒಂದೇ ಕೊಠಡಿಯಲ್ಲಿ ಇರಿಸಲಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದಾರೆ.

‘ನ್ಯಾಯಾಲಯಕ್ಕೆ ಹೋಗಿ ವಾಪಸ್ ಜೈಲಿಗೆ ಕಳುಹಿಸುವಾಗ ಕೋವಿಡ್ ಪರೀಕ್ಷೆ ನಡೆಸಬೇಕು ಎಂಬುದನ್ನು ಸೇರಿಸಿ ಎಸ್ಒಪಿ ಮಾರ್ಪಡಿಸಬೇಕು’ ಎಂದು ಪೀಠ ತಿಳಿಸಿತು. ಅರ್ಜಿದಾರರ ಆರೋಗ್ಯ ತಪಾಸಣೆ ನಡೆಸಿ ಪ್ರಮಾಣ ಪತ್ರ ಸಲ್ಲಿಸುವಂತೆ ನಿರ್ದೇಶನ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.