ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷಾ ವಿಧಾನ: ಬೆಂಗಳೂರು ವಿವಿಗೆ ₹50 ಲಕ್ಷ ಪ್ರೋತ್ಸಾಹ ಧನ

Published 5 ಮಾರ್ಚ್ 2024, 23:30 IST
Last Updated 5 ಮಾರ್ಚ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಪರೀಕ್ಷಾ ವಿಧಾನಗಳಲ್ಲಿ‌ ಹೊಸ ಪದ್ಧತಿ, ಅನುಷ್ಠಾನದ ಸಾಧನೆಯಲ್ಲಿ ‘ಅತ್ಯುತ್ತಮ ವಿಶ್ವವಿದ್ಯಾಲಯ’ ಎಂದು ಗುರುತಿಸಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಉನ್ನತ ಶಿಕ್ಷಣ ಇಲಾಖೆ ₹ 50 ಲಕ್ಷ ಪ್ರೋತ್ಸಾಹ ಧನ ನೀಡಿದೆ.

ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮಪಡಿಸಲು ಗುರುತಿಸಿದ 10 ಸುಶಾಸನ ಸೂಚ್ಯಂಕಗಳನ್ನು ಸಾಧಿಸಿದ ವಿಶ್ವವಿದ್ಯಾಲಯಗಳಿಗೆ ₹ 50 ಲಕ್ಷ ಪ್ರೋತ್ಸಾಹ ಧನ ನೀಡಲಾಗುವುದು ಎಂದು 2023-24ರ ಬಜೆಟ್‌ನಲ್ಲಿ ಸರ್ಕಾರ ಘೋಷಿಸಿತ್ತು. 

‘ಪರೀಕ್ಷಾ ವಿಧಾನ ಮತ್ತು ಅಭ್ಯಾಸದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಇಡೀ ರಾಜ್ಯದಲ್ಲಿ ಮುಂಚೂಣಿಯಲ್ಲಿದ್ದು, ಮೌಲ್ಯಮಾಪನವನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲಾಗಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಿದ ಮೊದಲ ವಿಶ್ವವಿದ್ಯಾಲಯ ಬೆಂಗಳೂರು. ವಲಸೆ ಪ್ರಮಾಣಪತ್ರ, ನಡತೆಯ ಪ್ರಮಾಣಪತ್ರ, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ದೃಢೀಕರಣ ಪತ್ರ ಸೇರಿದಂತೆ ಅನೇಕ ಸೇವೆಗಳನ್ನು ಏಕಗವಾಕ್ಷಿ ಕೇಂದ್ರದ ಮೂಲಕ ತ್ವರಿತವಾಗಿ ನೀಡಲಾಗುತ್ತಿದೆ. ತ್ವರಿತ ಮತ್ತು ದೋಷರಹಿತ ಫಲಿತಾಂಶದ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲಕರ ವ್ಯವಸ್ಥೆ ನಿರ್ಮಿಸಲಾಗಿದೆ’ ಎಂದು ಕುಲಸಚಿವ (ಮೌಲ್ಯಮಾಪನ ) ಸಿ. ಶ್ರೀನಿವಾಸ್ ತಿಳಿಸಿದರು.

‘‌ಪ್ರೋತ್ಸಾಹ ಧನದ ಮೊತ್ತವನ್ನು ಮೌಲ್ಯಮಾಪನ, ಡಿಜಿಟಲೀಕರಣ, ಮೂಲಸೌಕರ್ಯಗಳ ಉನ್ನತೀಕರಣಕ್ಕೆ ಸಮರ್ಪಕವಾಗಿ ಬಳಸಲಾಗುವುದು’ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT