‘ದಾವಣಗೆರೆ ಉಪಚುನಾವಣೆ ಸುತ್ತ ನಡೆದ ಘಟನೆಗಳ ನಂತರ ಮುಸ್ಲಿಮರ ಆಕ್ರೋಶಕ್ಕೆ ಬೆದರಿರುವ ಕಾಂಗ್ರೆಸ್ ಸರ್ಕಾರ, ಈಗ ತನ್ನ ಮತಬ್ಯಾಂಕ್ ಉಳಿಸಿಕೊಳ್ಳಲು ಹಿಜಾಬ್ ಅಸ್ತ್ರವನ್ನು ಕೈಗೆತ್ತಿಕೊಂಡಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.

‘ಬೆಲೆ ಏರಿಕೆ, ಭ್ರಷ್ಟಾಚಾರ, ರೈತರ ಸಂಕಷ್ಟ, ಕಾನೂನು ಸುವ್ಯವಸ್ಥೆಯ ವೈಫಲ್ಯ, ಇವೆಲ್ಲದರ ಬಗ್ಗೆ ಮೌನವಾಗಿರುವ ಕಾಂಗ್ರೆಸ್ ಸರ್ಕಾರ, ಮುನಿಸಿಕೊಂಡಿರುವ ಮುಸ್ಲಿಂ ಮತ ಬ್ಯಾಂಕ್ಗೆ ಹಿಜಾಬ್ ಮೂಲಕ ಮುಲಾಮು ಹಚ್ಚಲು ಹೊರಟಿದೆ’ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಶಾಲಾ– ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ 2022ರಲ್ಲಿ ಅಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ವಸ್ತ್ರ ಸಂಹಿತೆಯನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು ಮುಖ್ಯ ಎಂದು ತೀರ್ಪು ನೀಡಿತ್ತು. ಈಗ ಕೋರ್ಟ್ ಆದೇಶವನ್ನೇ ಗಾಳಿಗೆ ತೂರಿ ಒಂದು ಸಮುದಾಯದ ಓಲೈಕೆಗೆ ಮುಂದಾಗಿರುವುದು ಯಾವ ಸೀಮೆಯ ಜಾತ್ಯತೀತತೆ’ ಎಂದು ಅಶೋಕ ಪ್ರಶ್ನಿಸಿದ್ದಾರೆ.

‘ಹಿಜಾಬ್ಗೆ ಹಸಿರು ನಿಶಾನೆ ತೋರಿರುವ ಸರ್ಕಾರ, ಕೇಸರಿ ಶಾಲಿಗೆ ನಿಷೇಧ ಹೇರಿದೆ. ನಿಮ್ಮ ಈ ಓಲೈಕೆ ರಾಜಕಾರಣ ಹಿಂದೂಗಳಿಗೆ ಅರ್ಥವಾಗುವುದಿಲ್ಲ ಎಂದು ಭಾವಿಸಿದ್ದೀರಾ’ ಎಂದು ಅವರು ಮುಖ್ಯಮಂತ್ರಿಯನ್ನು ಪ್ರಶ್ನಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-1813714299

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.