ಬೆಂಗಳೂರು: ‘ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶಕ್ಕೆ ಕಿಮ್ಮತ್ತಿಲ್ಲವೇ’ ಎಂದು ಬಿಜೆಪಿ ಪ್ರಶ್ನಿಸಿದೆ.

ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಮಾತನಾಡಬಾರದು ಎಂದು ಜಮೀರ್ ಅವರಿಗೆ ಡಿಕೆಶಿ ಕಟ್ಟಪ್ಪಣೆ ನೀಡಿದ್ದರು. ಆದರೆ, ಸಿದ್ದರಾಮಯ್ಯ ಅವರು ಪಕ್ಷದ ವೇದಿಕೆಯಲ್ಲೇ ಹಿಜಾಬ್ ಸಭೆ ಕರೆದಿದ್ದಾರೆ. ಅದಕ್ಕೆ ಜಮೀರ್ ಅವರನ್ನೂ ಆಹ್ವಾನಿಸಿದ್ದಾರೆ. ಹಾಗಾದರೆ ಡಿಕೆಶಿ ಆದೇಶಕ್ಕೆ ಕಿಮ್ಮತ್ತಿಲ್ಲವೇ? ಎಂದು #ಕಾಂಗ್ರೆಸ್‌ಕಲಹ ಎಂಬ ಹ್ಯಾಷ್‌ಟ್ಯಾಗ್ ಉಲ್ಲೇಖಿಸಿ ವಾಗ್ದಾಳಿ ನಡೆಸಿದೆ.

ಓದಿ... ಮ್ಯಾಕ್ಸ್ವೆಲ್ ಮದುವೆ ಆಮಂತ್ರಣ ಪತ್ರ ತಮಿಳಿನಲ್ಲಿ; ಹುಡುಗಿ ಯಾರು ಗೊತ್ತಾ?

‘ಹಿಜಾಬ್ ವಿಚಾರದ ಬಗ್ಗೆ ಚರ್ಚಿಸುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಿರಿಯ ನಾಯಕರ ಸಭೆ ಕರೆದಿದ್ದಾರೆ. ಹಿಜಾಬ್ ಬಗ್ಗೆ ಯಾರೂ ಮಾತನಾಡಬಾರದು ಎಂಬ ಡಿ.ಕೆ.ಶಿವಕುಮಾರ್ ಆದೇಶಕ್ಕೆ ಸಿದ್ದರಾಮಯ್ಯ ಉಲ್ಟಾ ಹೊಡೆದಿದ್ದಾರೆ. ಅಸಮರ್ಥ ರಾಜ್ಯಾಧ್ಯಕ್ಷ ಡಿಕೆಶಿ ಅವರೀಗ ಹತಾಶೆಗೆ ಬಿದ್ದಿದ್ದಾರೆ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ವಿಚಾರಣೆ ಮುಂದುವರಿದಿದ್ದು, ಎಲ್ಲರ ಚಿತ್ತ ಕೋರ್ಟ್ ತೀರ್ಪಿನತ್ತ ನೆಟ್ಟಿದೆ.

ಓದಿ... ಕೊಹ್ಲಿ ಫಾರ್ಮ್ ವಿಚಾರ ಮಾಧ್ಯಮಗಳಿಂದಲೇ ಮುನ್ನೆಲೆಗೆ ಬಂದಿದೆ: ರೋಹಿತ್ ಶರ್ಮಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.