ಕೊಟ್ಟೂರು: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಆದೇಶವನ್ನು ಹಿಂಪಡೆಯುವ ಮೂಲಕ ಹೈಕೋರ್ಟ್ ಆದೇಶವನ್ನು ಕಾಂಗ್ರೆಸ್ ಸರ್ಕಾರ ಉಲ್ಲಂಘನೆ ಮಾಡಿದೆ ಎಂದು ಬಿಜೆಪಿ ನಗರ ಘಟಕ ಅಧ್ಯಕ್ಷ ಪಂಪಾಪತಿ ಅಂಗಡಿ ತಿಳಿಸಿದ್ದಾರೆ.

ಶೈಕ್ಷಣಿಕ ಸಂಸ್ಥೆಗಳು ಧರ್ಮ, ಜಾತಿ, ಭಾಷೆ ಮೀರಿ ವಿದ್ಯಾರ್ಥಿಗಳಲ್ಲಿ ಒಂದೇ ಗುರುತು ಮತ್ತು ಶಿಸ್ತಿನ ಮನೋಭಾವ ಬೆಳೆಸುವ ಸ್ಥಳವಾಗಿವೆ. ಧಾರ್ಮಿಕ ವೇಷಭೂಷಣಗಳಿಗೆ ಪ್ರತ್ಯೇಕ ಅವಕಾಶ ನೀಡುವುದರಿಂದ ವಿದ್ಯಾರ್ಥಿಗಳ ನಡುವೆ ವಿಭಜನೆಯ ಭಾವನೆ ಮೂಡುವ ಸಾಧ್ಯತೆ ಇದೆ. ಇದರಿಂದ ಸಮವಸ್ತ್ರ ಮೂಲ ಉದ್ದೇಶವೇ ದುರ್ಬಲವಾಗಬಹುದು ಎಂದಿದ್ದಾರೆ.

ಈ ವಿಚಾರ ಈಗ ನ್ಯಾಯಾಲಯದಲ್ಲಿರುವ ಸಂದರ್ಭದಲ್ಲಿ ಸರ್ಕಾರ ತುರ್ತು ನಿರ್ಧಾರ ಕೈಗೊಳ್ಳುವ ಅವಶ್ಯಕತೆ ಏನಿತ್ತು. ಶಿಕ್ಷಣದ ವಾತಾವರಣ, ವಿದ್ಯಾರ್ಥಿಗಳ ಮನೋಸ್ಥಿತಿ ಹಾಗೂ ಸಾಮಾಜಿಕ ಸಾಮರಸ್ಯವನ್ನು ಗಮನದಲ್ಲಿಟ್ಟುಕೊಂಡು ಸಮತೋಲನದ ನಿಲುವು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಒಂದೇ ನಿಯಮ ಅನ್ವಯಿಸುವ ಮೂಲಕ ಶಿಕ್ಷಣ ಸಂಸ್ಥೆಗಳ ಗೌರವ ಮತ್ತು ಏಕತೆಯನ್ನು ಕಾಪಾಡುವುದು ಅಗತ್ಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-25-1870240183

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.