ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್ ನಿಷೇಧ ವಾಪಸ್: ವಿದ್ಯಾರ್ಥಿಗಳ ಧಾರ್ಮಿಕ ವಿಭಜನೆ ಎಂದ ಬಿ.ವೈ ವಿಜಯೇಂದ್ರ

Published 23 ಡಿಸೆಂಬರ್ 2023, 2:57 IST
Last Updated 23 ಡಿಸೆಂಬರ್ 2023, 2:57 IST
ಅಕ್ಷರ ಗಾತ್ರ

ಬೆಂಗಳೂರು: ಈ ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ–ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ತರಗತಿಗೆ ಹಾಜರಾಗುವುದನ್ನು ನಿಷೇಧಿಸಿದ್ದನ್ನು ವಾಪಸ್ ಪಡೆಯಲು ಸೂಚಿಸಿದ್ದೇನೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರೋಧ ವ್ಯಕ್ತಪಡಿಸಿದ್ದಾರೆ.

‘ಹಿಜಾಬ್ ನಿಷೇಧ ವಾಪಸ್ ಪಡೆಯುವ ನಿರ್ಧಾರ ಶಿಕ್ಷಣ ಸಂಸ್ಥೆಗಳಲ್ಲಿ ಇರುವ ಜಾತ್ಯತೀತ ಸ್ವರೂಪವನ್ನು ಪ್ರಶ್ನಿಸುವಂತಿದೆ’ ಎಂದು ಅವರು ‘ಎಕ್ಸ್‌’ನಲ್ಲಿ ಬರೆದುಕೊಂಡಿದ್ದಾರೆ.

ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ವಸ್ತ್ರಕ್ಕೆ ಅನುಮತಿ ನೀಡುವ ಮೂಲಕ ಸಿದ್ದರಾಮಯ್ಯ ಅವರ ಸರ್ಕಾರವು, ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ. ಎಲ್ಲರನ್ನೂ ಒಳಗೊಳ್ಳುವ ಕಲಿಕೆಯ ವಾತಾವರಣಕ್ಕೆ ಇದು ಹಿನ್ನಡೆಯಾಗಲಿದೆ ಎಂದು ಅವರು ಬರೆದುಕೊಂಡಿದ್ದಾರೆ.

ವಿಭಜಿಸುವ ಪ್ರಕ್ರಿಯೆಗಳನ್ನು ಮೀರಿ ಶಿಕ್ಷಣಕ್ಕೆ ಆದ್ಯತೆ ನೀಡುವುದು ಮತ್ತು ಧಾರ್ಮಿಕ ಆಚರಣೆಗಳ ಪ್ರಭಾವವಿಲ್ಲದೆ ವಿದ್ಯಾರ್ಥಿಗಳು ಶಿಕ್ಷಣದ ಮೇಲೆ ಗಮನ ಕೇಂದ್ರೀಕರಿಸುವ ವಾತಾವರಣವನ್ನು ಸೃಜಿಸುವುದು ಮುಖ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?

ಹಿಜಾಬ್ ನಿಷೇಧ ವಾಪಸ್ ಪಡೆಯಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

ಮೈಸೂರಿನ ಕಲವಂದೆಯಲ್ಲಿ ಮಾತನಾಡಿದ್ದ ಅವರು, ‘ಉಡುಪು, ಆಹಾರ ಪದ್ಧತಿ... ಅವು ನಿಮ್ಮ ಆಯ್ಕೆ. ನಾನೇಕೆ ಇವುಗಳಿಗೆ ಅಡ್ಡಿಯಾಗಲಿ? ನೀವು ಬಯಸಿದ ಉಡುಪನ್ನು ಧರಿಸಿ, ನಿಮಗೆ ಬೇಕಾದದ್ದನ್ನು ತಿನ್ನಿ. ನನಗೆ ಬೇಕೆನಿಸಿದ್ದನ್ನು ನಾನು ತಿನ್ನುವೆ. ಉಡುಪು, ಆಹಾರ ಅವರವರ ಇಷ್ಟ ಮತ್ತು ಹಕ್ಕು. ಇದು ತುಂಬಾ ಸರಳ, ಓಟಿಗಾಗಿ ರಾಜಕಾರಣ ಮಾಡಬಾರದು. ನಾವು ಅಂತಹ ರಾಜಕಾರಣ ಮಾಡುವುದಿಲ್ಲ’ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT