ನೇತ್ರಾವತಿ ತಟದಲ್ಲಿ ತನಿಖೆ, ಬುರುಡೆ ಶೋಧದ ನೆಪದಲ್ಲಿ ಹಿಂದು ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ.ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು.ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯ ಹೆಜ್ಜೆ ಇಡಲಿ. ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ.
ಧರ್ಮಸ್ಥಳ ವಿಚಾರದಲ್ಲಿ ಸರ್ಕಾರ ಏನು ಮಾಡುತ್ತಿದೆ ? ಇದೇನು ತನಿಖೆಯೋ ? ದೊಂಬಿಯೋ? ಹಿಂದು ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ಯೋಜಿತ ಅಪಪ್ರಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯೂ ಟ್ಯೂಬರ್ ಗಳು ಹಾಗೂ ಅನ್ಯಮತೀಯರ ಕೈಗೊಂಬೆಯಾಗಿ ಕುಣಿಯುತ್ತಿದೆಯೇ ? 1/2
ನಾಡಿನ ಪ್ರಮುಖ ವಾಹಿನಿಯ ಮೇಲೆ, ಸ್ಥಳೀಯ ನಾಗರಿಕರ ಮೇಲೆ ಈ ಹೋರಾಟಗಾರರ ಸೋಗಿನ ವ್ಯಕ್ತಿಗಳು ಹಲ್ಲೆ, ಗೂಂಡಾಗಿರಿ ಮಾಡುತ್ತಿದ್ದರೂ ಪೊಲೀಸ್ ಇಲಾಖೆ ಏನು ಮಾಡುತ್ತಿದೆ ? ಸಹನೆಗೂ ಒಂದು ಮಿತಿ ಇದೆ. ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ. 2/2 @DKShivakumar@siddaramaiah@DrParameshwara