ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂ ದೇಗುಲಗಳ ಆಡಳಿತಕ್ಕೂ ಪ್ರತ್ಯೇಕ ವ್ಯವಸ್ಥೆ ಬೇಕು:ರಾಮದಾಸ್‌

Last Updated 1 ಜನವರಿ 2022, 18:03 IST
ಅಕ್ಷರ ಗಾತ್ರ

ಮೈಸೂರು: ‘ಮುಸ್ಲಿಂ ಧಾರ್ಮಿಕ ಕೇಂದ್ರಗಳ ಆಡಳಿತಕ್ಕೆ ವಕ್ಫ್‌ ಬೋರ್ಡ್‌, ಕ್ರೈಸ್ತರ ಧಾರ್ಮಿಕ ಕೇಂದ್ರಗಳ ಆಡಳಿತಕ್ಕೆ ಪ್ರತ್ಯೇಕ ವ್ಯವಸ್ಥೆ ಇದೆ. ಹಿಂದೂ ದೇಗುಲಗಳ ಆಡಳಿತ, ಅಭಿವೃದ್ಧಿಗೆ ಏಕೆ ಪ್ರತ್ಯೇಕ ವ್ಯವಸ್ಥೆ ಇರಬಾರದು? ಬೇರೆ ಯಾವುದೋ ಒಂದು ವೋಟ್‌ ಬ್ಯಾಂಕ್‌ ಓಲೈಕೆಗಾಗಿ, ರಾಜಕೀಯ ಕಾರಣಗಳಿಗಾಗಿ ಕಾಂಗ್ರೆಸ್‌ ಅದನ್ನು ವಿರೋಧಿಸುತ್ತಿದೆ’ ಎಂದು ಶಾಸಕ ಎಸ್‌.ಎ.ರಾಮದಾಸ್‌ ಟೀಕಿಸಿದರು.

‘ಹಿಂದೂ ದೇಗುಲಗಳ ಮೇಲಿನ ಸರ್ಕಾರದ ಹಿಡಿತವನ್ನು ಸಡಿಲಗೊಳಿಸಿ, ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಆಯಾ ಪ್ರದೇಶದ ದೇಗುಲಗಳ ಆದಾಯವನ್ನು ಅದೇ ಪ್ರದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕೆಂಬುದು ಅದರ ಉದ್ದೇಶ. ದೇಗುಲದ ಆಸ್ತಿಯನ್ನು ಖಾಸಗಿ
ಯವರಿಗೇನು ಕೊಡುತ್ತಿಲ್ಲ. ಬಿಜೆಪಿ ಸರ್ಕಾರ ಆ ಸಂಬಂಧ ಖಂಡಿತ ಕಾನೂನು ರೂಪಿಸಲಿದೆ’ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘2023ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕಾಯ್ದೆ ಹಿಂಪಡೆಯಲಾಗುವುದು’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಕಾಂಗ್ರೆಸ್ ಪಕ್ಷದವರು ಕನಸು ಕಾಣುತ್ತಿದ್ದಾರೆ. ಮುಂದಿನ ಚುನಾವಣೆವರೆಗೆ ಕನಸು ಕಾಣಲು ಯಾವುದೇ ಅಭ್ಯಂತರ ಇಲ್ಲ’ ಎಂದು ವ್ಯಂಗ್ಯವಾಡಿದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನುಡಿದಂತೆ ನಡೆಯುವವರು. ಸಂಕ್ರಾಂತಿ ನಂತರ ಸಂಘಟನೆ, ಅಭಿವೃದ್ಧಿ ವಿಚಾರವಾಗಿ ಕ್ರಾಂತಿಯಾಗಲಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ’ ಎಂದು ರಾಮದಾಸ್‌ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT