ಹಿರಿಯೂರು: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಉದ್ಯಮಿಗಳ ಪರ ನಿಲುವು ತಾಳುತ್ತಿರುವ ಕಾರಣಕ್ಕೆ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ’ ಎಂದು ಸಿಪಿಐ ರಾಜ್ಯ ಮಂಡಳಿ ಸದಸ್ಯ ಉಮಾಪತಿ ಬೇಸರ ವ್ಯಕ್ತಪಡಿಸಿದರು.

ನಗರದ ಹುಳಿಯಾರು ರಸ್ತೆಯಲ್ಲಿ ಶನಿವಾರ ಎಐಟಿಯುಸಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಕಾರ್ಮಿಕರು ಸೌಲಭ್ಯಗಳನ್ನು ಪಡೆಯಲು ಬೀದಿಗಿಳಿದು ಹೋರಾಟ ನಡೆಸಬೇಕಿದೆ. ಅಧಿಕಾರದಲ್ಲಿದ್ದವರು ಕಾರ್ಮಿಕರನ್ನು ದಿವಾಳಿಯ ಅಂಚಿಗೆ ತಳ್ಳಿದ್ದಾರೆ. ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತಂದು ಕನಿಷ್ಟ ವೇತನ ಪದ್ಧತಿ ಜಾರಿಗೆ ತರಬೇಕು. ಇತ್ತೀಚೆಗೆ ಎಐಟಿಯುಸಿ ಸುಪ್ರೀಂ ಕೋರ್ಟ್ನಲ್ಲಿ ಕಾರ್ಮಿಕರ ಪರ ಹೋರಾಟ ನಡೆಸಿದ ಪರಿಣಾಮ ರಾಜ್ಯ ಸರ್ಕಾರ 99 ಉದ್ಯೋಗಿಗಳಿಗೆ ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ’ ಎಂದು ಹೇಳಿದರು.

‘ಸರ್ಕಾರಿ ಶಾಲಾ–ಕಾಲೇಜುಗಳಲ್ಲಿ ಶಿಕ್ಷಕರಿಲ್ಲ. ಆಸ್ಪತ್ರೆಗಳಿಗೆ ವೈದ್ಯರನ್ನು ನೇಮಿಸುತ್ತಿಲ್ಲ. ಹಾಸ್ಟೆಲ್ಗಳು ಅವಾಂತರಗಳ ಗೂಡುಗಳಾಗಿವೆ. ವಸತಿ ನಿಲಯದಲ್ಲಿರುವವರಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ದರ ಸಿಗುತ್ತಿಲ್ಲ. ಇದರ ವಿರುದ್ಧ ರೈತರು, ಕಾರ್ಮಿಕರು, ನಿರುದ್ಯೋಗಿಗಳು ಸಂಘಟಿತ ಹೋರಾಟ ನಡೆಸಬೇಕಿದೆ’ ಎಂದು ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಜಾಫರ್ ಷರೀಫ್ ತಿಳಿಸಿದರು.

‘ಅಂಗನವಾಡಿ ಕಾರ್ಯಕರ್ತೆಯರು–ಸಹಾಯಕಿಯರು ಇಂದಿಗೂ ಕನಿಷ್ಠ ವೇತನಕ್ಕೆ ದುಡಿಯುತ್ತಿದ್ದು, ಸಂಘಟನೆ ಮೂಲಕ ಕೇಂದ್ರ–ರಾಜ್ಯ ಸರ್ಕಾರಗಳ ವಿರುದ್ಧ ಹೋರಾಟ ನಡೆಸುವ ಮೂಲಕ ನಮ್ಮ ಹಕ್ಕುಗಳನ್ನು ಪಡೆಯೋಣ’ ಎಂದು ಅಂಗನವಾಡಿ ರಾಜ್ಯ ಫೆಡರೇಷನ್ನ ಪ್ರಧಾನ ಕಾರ್ಯದರ್ಶಿ ಜಯಮ್ಮ ಮನವಿ ಮಾಡಿದರು.

‘ಹಿರಿಯೂರಿನ ವಾಣಿ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಮರಳಿ ಆರಂಭಿಸುವ ಕೆಲಸವನ್ನು ಯಾರೂ ಮಾಡುತ್ತಿಲ್ಲ. ಕಾರ್ಖಾನೆ ಮುಚ್ಚಿರುವ ಕಾರಣ ಹಲವು ಕಾರ್ಮಿಕ ಕುಟುಂಬಗಳು ಬೀದಿಗೆ ಬಿದ್ದಿವೆ. ಮತ್ತೆ ಕಾರ್ಖಾನೆ ಆರಂಭಿಸಬೇಕು’ ಎಂದು ಕಾರ್ಮಿಕ ಮುಖಂಡ ಎಸ್.ಸಿ. ಕುಮಾರ್ ಆಗ್ರಹಿಸಿದರು.

ಸಿಪಿಐ ಕಾರ್ಯದರ್ಶಿ ತಿಪ್ಪಮ್ಮ ಅಧ್ಯಕ್ಷತೆ ವಹಿಸಿದ್ದರು. ಹಲವು ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-44-1695789021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.