ಬೆಂಗಳೂರು: 'ಜಪಾನಿನ ಹಿಟಾಚಿ ಕನ್ಸ್ಟ್ರಕ್ಷನ್ ಮಷಿನರಿ ಕಂಪನಿಯು ಧಾರವಾಡದಲ್ಲಿ ನಿರ್ಮಾಣ ಯಂತ್ರೋಪಕರಣಗಳ ವಿನ್ಯಾಸ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲಿದೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ತಿಳಿಸಿದ್ದಾರೆ.

ಬಂಡವಾಳ ಆಕರ್ಷಣೆಗಾಗಿ ಜಪಾನ್ ಪ್ರವಾಸದಲ್ಲಿರುವ ಅವರು ಹಿಟಾಚಿ ಕಂಪನಿಯ ಪ್ರತಿನಿಧಿಗಳ ಭೇಟಿಯ ನಂತರ ಹೊರಡಿಸಿದ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ.

‘ಧಾರವಾಡದಲ್ಲಿ ಈ ಕೇಂದ್ರವು 2027ರ ವೇಳೆಗೆ ಕಾರ್ಯಾರಂಭ ಮಾಡಲಿದೆ. ಜಾಗತಿಕ ಮಾರುಕಟ್ಟೆಗಾಗಿ ತಯಾರಿಸಲಾಗುವ ಯಂತ್ರೋಪಕರಣಗಳ ವಿನ್ಯಾಸ ಮತ್ತು ಅಭಿವೃದ್ಧಿ ಈ ಘಟಕದಲ್ಲಿ ನಡೆಯಲಿದೆ. 200 ಎಂಜಿನಿಯರ್ಗಳಿಗೆ ಉದ್ಯೋಗಾವಕಾಶ ದೊರೆಯಲಿದೆ’ ಎಂದು ತಿಳಿಸಿದ್ದಾರೆ.

‘ವಾಹನಗಳ ಏರ್ಬ್ಯಾಗ್ನ ಬಿಡಿಭಾಗಗಳ ತಯಾರಿಕಾ ಕಂಪನಿ ಅಸಾಹಿ ಕಸೆಯಿ ಅಡ್ವಾನ್ಸ್ಡ್ ಬೆಂಗಳೂರಿನಲ್ಲಿ ಬಿಡಿಭಾಗಗಳ ತಯಾರಿಕಾ ಘಟಕ ಸ್ಥಾಪಿಸುವುದಾಗಿ ಹೇಳಿದೆ. ಈ ಹೂಡಿಕೆ ನಿರ್ಧಾರವು ರಾಜ್ಯದಲ್ಲಿ ವಾಹನ ತಯಾರಿಕಾ ವಲಯ ವಿಸ್ತರಣೆಯಾಗುತ್ತಿರುವುದಕ್ಕೆ ಪೂರಕವಾಗಿದೆ’ ಎಂದಿದ್ದಾರೆ.

ಸಚಿವರು ಜಪಾನ್ ಭೇಟಿಯ ಎರಡನೇ ದಿನ ರೆನೆಸಾನ್ ಎಲೆಕ್ಟ್ರಾನಿಕ್ಸ್, ಯಮಾಹಾ ರೋಬೊಟಿಕ್ಸ್ನ ಪ್ರತಿನಿಧಿಗಳ ಜತೆಗೆ ಮಾತುಕತೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.