ನವದೆಹಲಿ: ಕಾನೂನು ಸಚಿವ ಎಚ್.ಕೆ.ಪಾಟೀಲ ವಿರುದ್ಧದ ಚುನಾವಣಾ ಅಕ್ರಮ ಆರೋಪದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

2023ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ಪಂಚ ಗ್ಯಾರಂಟಿಗಳ ಘೋಷಿಸಿದ್ದರಿಂದ ಗದಗ ಕ್ಷೇತ್ರದಲ್ಲಿ ಎಚ್.ಕೆ.ಪಾಟೀಲ ಗೆದ್ದಿದ್ದಾರೆ ಎಂದು ಆರೋಪಿಸಿ ಮಹೇಶ್ ಎನ್.ರೊಖಡೆ ಎಂಬುವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜೊಯ್ಮಲ್ಯ ಬಾಗ್ಚಿ ಪೀಠವು ಅರ್ಜಿ ವಜಾಗೊಳಿಸಿತು.

ಪಾಟೀಲ ಅವರು ಚುನಾವಣಾ ಅಕ್ರಮ ನಡೆಸಿ ಗೆಲುವು ಸಾಧಿಸಿದ್ದು, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಅವರ ಅರ್ಜಿಯನ್ನು ಹೈಕೋರ್ಟ್ ಧಾರವಾಡ ಪೀಠ 2025ರ ಮಾರ್ಚ್ನಲ್ಲಿ ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.