ಕಠಿಣ ಕ್ರಮವಿಲ್ಲ
‘ಇಲ್ಲಿಯವರೆಗೂ ದೇಶದ ಎಲ್ಲೂ ಗಂಭೀರ ಪ್ರಕರಣಗಳು ವರದಿಯಾಗಿಲ್ಲ. ಹೀಗಾಗಿ, ಪರೀಕ್ಷೆ, ಮಾಸ್ಕ್ ಧರಿಸುವುದು ಸೇರಿದಂತೆ ಯಾವುದೇ ಕಠಿಣ ಕ್ರಮವನ್ನು ಜಾರಿಗೊಳಿಸುವುದಿಲ್ಲ. ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರದಿಂದಲೂ ಸೂಚನೆಗಳು ಬಂದಿಲ್ಲ’ ಎಂದು ಸಚಿವ ದಿನೇಶ್ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ‘ಸದ್ಯ, ರಾಜ್ಯದಲ್ಲಿ ಆಗುತ್ತಿರುವ ವಿದ್ಯಮಾನಗಳನ್ನು ಕೇಂದ್ರ ಸರ್ಕಾರಕ್ಕೆ ತಿಳಿಸುತ್ತಿದ್ದೇವೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೂಚನೆಗಳನ್ನು ಅನುಸರಿಸುತ್ತೇವೆ. ರಾಜ್ಯದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದರು.