ಬೆಂಗಳೂರು: ‘ರಾಜ್ಯದಲ್ಲಿ ಎಚ್ಎಂಪಿ ವೈರಾಣು ಸೋಂಕಿನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

‘ಚೀನಾದಲ್ಲಿ ಎಚ್ಎಂಪಿ ವೈರಾಣು ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲೂ ಈ ವೈರಾಣು ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಾಣು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಾಣು ಹರಡದಂತೆ ತಡೆಯಲು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ‘ ಎಂದರು.

ಸೋಂಕು ತಡೆಗಟ್ಟಲು ವಿಮಾನ ನಿಲ್ದಾಣಗಳಲ್ಲಿ ತಪಾಸಣೆಯನ್ನು ಪನಃ ಆರಂಭಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು’ ಎಂದರು.
.ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ HMP ವೈರಸ್ ಪತ್ತೆ: ಆತಂಕ ಇಲ್ಲ ಎಂದ ವೈದ್ಯರು.HMP ವೈರಸ್ | ಆತಂಕಬೇಡ, ಮುನ್ನೆಚ್ಚರಿಕೆಗಳೇನು? ಆರೋಗ್ಯ ಇಲಾಖೆಯ ಮಾರ್ಗಸೂಚಿ.
ನಕ್ಸಲರು ಶರಣಾಗುವ ಸಾಧ್ಯತೆ

ನಕ್ಸಲರ ಶರಣಾಗತಿಗೆ ಸರ್ಕಾರ ಸಿದ್ಧವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ನಕ್ಸಲರು ಶರಣಾಗಲಿ ಎಂದು ಕರೆ ನೀಡಿದ್ದೇನೆ. ನಕ್ಸಲರ ಮನಃ ಪರಿವರ್ತನೆಯಾಗಿ ಶರಣಾಗುವ ಸಾಧ್ಯತೆಯಿದೆ. ಸಮಾಜದ ಮುಖ್ಯವಾಹಿನಿಗೆ ಅವರನ್ನು ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ’ ಎಂದರು.

ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಅವರು ರಾಜ್ಯಸರ್ಕಾರದ ಕಮೀಷನ್ ಪ್ರಮಾಣ ಶೇ 60ಕ್ಕೆ ತಲುಪಿದೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ‘ಹಿಂದಿನ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಕಮೀಷನ್ ಆರೋಪವನ್ನು ಗುತ್ತಿಗೆದಾರ ಸಂಘದ ಅಧ್ಯಕ್ಷರು ಕೆಂಪಯ್ಯನವರು ಮಾಡಿದ್ದರು. ಬಿಜೆಪಿಯವರು ಕಮಿಷನ್ ತೆಗೆದುಕೊಂಡಿರುವುದಾಗಿ ಕೆಂಪಯ್ಯನವರು ಆರೋಪಿಸಿದ್ದಾಗಿ’ ತಿಳಿಸಿದರು.
.ಕೋವಿಡ್–19 ಹೋಲುವ ಹೊಸ HMP ವೈರಾಣು ಸೋಂಕು ಚೀನಾದಲ್ಲಿ ಉಲ್ಬಣ; ಹೆಚ್ಚಿದ ಆತಂಕ.ಚಳಿಗಾಲದಲ್ಲಿ ಉಸಿರಾಟ ಸಮಸ್ಯೆ ಸಾಮಾನ್ಯ; ವೈರಾಣು ಸೋಂಕು ವರದಿ ಅಲ್ಲಗಳೆದ ಚೀನಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.