ಚಿತ್ರದುರ್ಗ: ಬಿ.ಎಸ್.ಯಡಿಯೂರಪ್ಪ ಅವರ ದಂ ಏನು ಎಂಬುದನ್ನು ಕಾಲಕಾಲಕ್ಕೆ ರಾಜ್ಯದ ಜನರಿಗೆ ತೋರಿಸಿದ್ದಾರೆ. ಆದ್ದರಿಂದಲೇ ಐದು ವರ್ಷ ಆಡಳಿತ ಮಾಡಿದ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಕ್ಷ ಆಡಳಿತ ನಡೆಸುತ್ತಿದ್ದಾರೆ. ಕೇಂದ್ರದಿಂದ ಅತಿ ಹೆಚ್ಚು ಅನುದಾನ ತಂದಿದ್ದಾರೆ. ಜಿಎಸ್‌ಟಿಗೆ ಸಂಬಂಧಿಸಿದ ₹ 4,300 ಕೋಟಿ ಅನುದಾನ ಕರ್ನಾಟಕಕ್ಕೆ ಸಿಕ್ಕಿದೆ’ ಎಂದು ಹೇಳಿದರು.

‘ಕೊರೊನಾ ಸೋಂಕಿತರಿಗೆ ಈವರೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. ಖಾಸಗಿ ಆಸ್ಪತ್ರೆಯ ದರಪಟ್ಟಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.