ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನಿಖೆಯಲ್ಲಿ ಯಾವುದೇ ಗೊಂದಲವಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಮಂಗಳೂರು ಬಾಂಬ್‌ ಪ್ರಕರಣ
Last Updated 23 ಜನವರಿ 2020, 12:37 IST
ಅಕ್ಷರ ಗಾತ್ರ

ದಾವಣಗೆರೆ: ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟ ಪ್ರಕರಣದ ತನಿಖೆ ನಡೆಯುತ್ತಿದೆ. ಯಾವುದೇ ಗೊಂದಲವಿಲ್ಲ. ತನಿಖೆಯಿಂದ ಸತ್ಯ ಹೊರಬರಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಆರೋಪಿಯು ಮಾನಸಿಕ ಅಸ್ವಸ್ಥ ಎಂದು ನಾನು ಹೇಳಿಕೆ ನೀಡಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಮೊದಲ ಹಂತದ ತನಿಖೆ ಮುಗಿದಿದೆ. ನ್ಯಾಯಾಲಯದಿಂದ ಮತ್ತೆ ಕಸ್ಟಡಿಗೆ ಪಡೆದ ಬಳಿಕ ತನಿಖೆ ಮುಂದುವರಿಯಲಿದೆ ಎಂದು ಮಂಗಳೂರಿನ ಕಮಿಷನರ್‌ ಈಗಾಗಲೇ ಹೇಳಿದ್ದಾರೆ’ ಎಂದು ತಿಳಿಸಿದರು.

ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ತರಲು ಹೋದಾಗ ಬಿಜೆಪಿಯವರು ವಿರೋಧಿಸಿದ್ದರು. ಈಗ ಅವರೇ ಜಾರಿಗೆ ತರುತ್ತಿದ್ದಾರೆ ಎಂದು ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅದರಲ್ಲಿ ತುಂಬಾ ಗೊಂದಲಗಳಿದ್ದವು. ಅವುಗಳನ್ನು ನಿವಾರಣೆ ಮಾಡಲಾಗಿದೆ. ಈಗ ಅನುಷ್ಠಾನಕ್ಕೆ ತರಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.

‘ಕುಮಾರಸ್ವಾಮಿ ಹೇಳಿಕೆ ಬಗ್ಗೆ ಅವರನ್ನೇ ಕೇಳಿ. ಆರ್‌ಎಸ್‌ಎಸ್‌, ಭಜರಂಗದಳ ದೇಶಭಕ್ತಿಯ ಸಂಘಟನೆಗಳು. ಜನರು ಸಂಕಷ್ಟದಲ್ಲಿ ಇರುವಾಗ ಸೇವೆ ಮಾಡಿದ್ದಾರೆ. ಅಪಘಾತ, ನೆರೆ ಹಾವಳಿಯಾದಾಗ ಅವರು ಮಾಡಿದ ಸೇವೆಯಲ್ಲಿ ದೇಶಕ್ಕೇ ಮಾದರಿಯಾಗಿದ್ದಾರೆ. ಈ ಸಂಘಟನೆಗಳನ್ನು ನಿಷೇಧಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT