ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೃಥ್ವಿಸಿಂಗ್‌ ಮೇಲೆ ಹಲ್ಲೆ: ಪೊಲೀಸರಿಂದ ವರದಿ ಕೇಳಿದ್ದೇನೆ– ಗೃಹ ಸಚಿವ ಪರಮೇಶ್ವರ

Published 5 ಡಿಸೆಂಬರ್ 2023, 10:59 IST
Last Updated 5 ಡಿಸೆಂಬರ್ 2023, 10:59 IST
ಅಕ್ಷರ ಗಾತ್ರ

ಬೆಳಗಾವಿ: ‘ಬಿಜೆಪಿ ಮುಖಂಡ ಪೃಥ್ವಿಸಿಂಗ್‌ ಅವರ ಮೇಲೆ ಸೋಮವಾರ ಸಂಜೆ ಚಾಕುವಿನಿಂದ ಹಲ್ಲೆ ನಡೆದ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಿ ವರದಿ ನೀಡಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ವರದಿ ಆಧರಿಸಿದ ಕ್ರಮ ಕೈಗೊಳ್ಳುತ್ತೇನೆ’ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಘಟನೆಗೆ ಸಂಬಂಧಿಸಿದ ಸಿಸಿಟಿವಿ ಕ್ಯಾಮೆರಾ, ಸ್ಥಳ ಪರಿಶೀಲಿಸಲು ತಿಳಿಸಿದ್ದೇನೆ. ಈ ಪ್ರಕರಣದಲ್ಲಿ ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ತನಿಖೆ ಮೂಲಕವೇ ಗೊತ್ತಾಗಬೇಕು. ಪೊಲೀಸರು ತನಿಖೆ ನಡೆಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT