ಬೆಂಗಳೂರು: ತಮ್ಮನ್ನು ‘ಮಧುಬಲೆ’ಗೆ (ಹನಿಟ್ರ್ಯಾಪ್) ಕೆಡವಲು ಯತ್ನಿಸಿದ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.

ಸದಾಶಿವನಗರದ ಗೃಹ ಸಚಿವರ ಮನೆಯಲ್ಲಿ ಮಂಗಳವಾರ ಸಂಜೆ ಭೇಟಿಯಾಗಿ ಮನವಿ ಸಲ್ಲಿಸಿದರು. ಬಳಿಕ ಪರಮೇಶ್ವರ ಮತ್ತು ರಾಜಣ್ಣ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಈ ವಿಚಾರದಲ್ಲಿ ದೂರನ್ನು ನಾನು ಸ್ವೀಕರಿಸಲು ಸಾಧ್ಯವಿಲ್ಲ. ಪೊಲೀಸ್ ಠಾಣೆಯಲ್ಲೇ ದೂರು ಸಲ್ಲಿಸಬೇಕಾಗುತ್ತದೆ. ಈ ಮನವಿಯ ಆಧಾರದ ಮೇಲೆ ಕಾನೂನು ತಜ್ಞರ ಜೊತೆ ಚರ್ಚಿಸಿ, ಅವರ ಸಲಹೆ ಆಧರಿಸಿ ತೀರ್ಮಾನ ಮಾಡುತ್ತೇವೆ’ ಎಂದು ಪರಮೇಶ್ವರ ತಿಳಿಸಿದರು.
.ಮಧುಬಲೆ ಪ್ರಕರಣ: ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ .Honey Trap | ಮಧುಬಲೆ: ಹೈಕಮಾಂಡ್ ಗರಂ, ಖರ್ಗೆ-ಸಿಎಂ ರಹಸ್ಯ ಚರ್ಚೆ.
‘ಸದನದಲ್ಲಿ ನಡೆದ ಘಟನೆ ಮತ್ತು ಅದರ ಮುಂದುವರಿದ ಭಾಗವಾಗಿ ನನಗೆ ದೂರು ನೀಡುವುದಾಗಿ ತಿಳಿಸಿದ್ದರು. ಕಾನೂನು ವ್ಯಾಪ್ತಿಯಲ್ಲಿ ನಮಗೆ ಇರುವ ಅವಕಾಶಗಳ ಕುರಿತು ಕಾನೂನು ತಜ್ಞರು ಹಾಗೂ ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

‘ವಿಷಯ ಈಗ ಸದನದ ಸ್ವತ್ತಾಗಿದೆ. ಈ ಕಾರಣಕ್ಕಾಗಿ ದೂರು ಸಲ್ಲಿಕೆಯಾಗುವವರೆಗೂ ನಾವು ಕಾಯುತ್ತಿದ್ದೆವು’ ಎಂದು ಹೇಳಿದರು.

ಈ ಚಾಳಿ ಮುಂದುವರಿಯಬಾರದು: ‘ಹನಿಟ್ರ್ಯಾಪ್ ಸಂಬಂಧ ನನ್ನ ಹೆಸರನ್ನು ಸದನದಲ್ಲಿ ಪ್ರಸ್ತಾಪಿಸಲಾಗಿತ್ತು. ಆ ಕಾರಣದಿಂದ ನಾನು ದೂರು ಸಲ್ಲಿಸಿದ್ದೇನೆ. ಈ ರೀತಿಯ ಕೆಟ್ಟ ಚಾಳಿ ಸಾರ್ವಜನಿಕ ಜೀವನದಲ್ಲಿ ಮುಂದುವರಿಯಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಂಡಿದ್ದೇನೆ’ ಎಂದು ಕೆ.ಎನ್. ರಾಜಣ್ಣ ತಿಳಿಸಿದರು.

‘ಮಾಧ್ಯಮಗಳಲ್ಲಿ ತುಮಕೂರಿನ ಸಚಿವರು ಹನಿಟ್ರ್ಯಾಪ್ಗೆ ಸಿಲುಕಿದ್ದಾರೆ ಎಂಬ ಸುದ್ದಿ ಪ್ರಸಾರವಾಗಿತ್ತು. ಈ ಬಗ್ಗೆ ಸದನದಲ್ಲಿ ಪ್ರಸ್ತಾಪ ಆಗಿತ್ತು. ಆಗ, ನಾನು ಪ್ರತಿಕ್ರಿಯಿಸಿದ್ದೆ. ದೂರು ನೀಡಿದರೆ ತನಿಖೆ ನಡೆಸುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದರು. ಆ ಕಾರಣದಿಂದ ದೂರು ಸಲ್ಲಿಸಿದ್ದೇನೆ’ ಎಂದರು.
.KN ರಾಜಣ್ಣ ದೂರು ಕೊಟ್ಟರೆ ಹನಿಟ್ರ್ಯಾಪ್ ಬಗ್ಗೆ ಉನ್ನತ ತನಿಖೆ ನಡೆಸುತ್ತೇವೆ: ಸಿಎಂ.ಹನಿಟ್ರ್ಯಾಪ್ ಯತ್ನ ಕುರಿತು ಇಂದು ಸಂಜೆ ದೂರು ಸಲ್ಲಿಸುವೆ: ಕೆ.ಎನ್. ರಾಜಣ್ಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.