ಹೊನ್ನಾಳಿ: ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಮುಸ್ಲಿಂ ಮಹಿಳೆಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದ್ದು ಏಕೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

‘ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ದೃಷ್ಟಿಯಿಂದ ಹಿಜಾಬ್ಗೆ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿಯನ್ನು ಕೋಮುವಾದಿ ಎಂದು ಆರೋಪಿಸುತ್ತಿರುವ ಕಾಂಗ್ರೆಸ್, ತಾನು ಮಾಡುತ್ತಿರುವುದೇನು ಎಂದು ಅವಲೋಕಿಸಿಕೊಳ್ಳಬೇಕು’ ಎಂದರು.

ಪ್ರಕರಣ ಸುಪ್ರೀಂ ಕೋರ್ಟ್ನ ಮುಂದಿದ್ದು, ಇನ್ನೂ ಇತ್ಯರ್ಥವಾಗಬೇಕಾಗಿದೆ. ಹೀಗಿರುವಾಗ ಸರ್ಕಾರ ತೆಗೆದುಕೊಂಡ ನಿರ್ಧಾರ ನ್ಯಾಯಾಂಗ ನಿಂದನೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದಿಂದ ಕಂಗೆಟ್ಟಿರುವ ಕಾಂಗ್ರೆಸ್, ಮುಂದಿನ ದಿನಗಳಲ್ಲಿ ಮುಸ್ಲಿಮರು ಪಕ್ಷದಿಂದ ದೂರ ಸರಿಯುತ್ತಾರೆ ಎನ್ನುವ ಕಾರಣಕ್ಕೆ ಈ ಪ್ರಕರಣಕ್ಕೆ ಮರುಜೀವ ನೀಡಿದೆ. ಕುರ್ಚಿ ಕಚ್ಚಾಟದಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಈ ತಂತ್ರ ಉಪಯೋಗಿಸಿದೆ ಎಂದು ಆರೋಪಿಸಿದರು.

‘ಸರ್ಕಾರ ಕೂಡಲೇ ಈ ಆದೇಶ ಹಿಂಪಡೆಯದಿದ್ದರೆ ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಧರಿಸಿ ಬನ್ನಿ ಎಂದು ಕರೆ ಕೊಡಬೇಕಾಗುತ್ತದೆ’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಅರಕೆರೆ ನಾಗರಾಜ್, ಜೆ.ಕೆ. ಸುರೇಶ್, ರಂಗನಾಥ್, ಫಾಲಾಕ್ಷಪ್ಪ, ಓಬಳದಾರ ಬಾಬು, ಮಾರುತಿನಾಯ್ಕ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-43-1171343695

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.