ಹೊನ್ನಾಳಿ: ‘ಕೋವಿಡ್ ಸೋಂಕಿತರ ನೋವಿನಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯ. ಹೀಗಾಗಿ ಬಸವ ಜಯಂತಿ ಅಂಗವಾಗಿ ಸೋಂಕಿತರಿಗೂ ಹೋಳಿಗೆ ಊಟ ನೀಡುವ ಮೂಲಕ ಅವರ ನೋವಿನಲ್ಲಿ ಭಾಗಿಯಾಗಿದ್ದೇವೆ’ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಕೋವಿಡ್ ಸೋಂಕಿತರು, ನ್ಯಾಮತಿ ತಾಲ್ಲೂಕಿನ ಮಾದನಬಾವಿಯ ಕೋವಿಡ್ ಕೇರ್ ಸೆಂಟರ್‌ನಲ್ಲಿರುವ ಸೋಂಕಿತರು, ಅವಳಿ ತಾಲ್ಲೂಕಿನ ಕರೊನಾ ವಾರಿಯರ್‌ಗಳು, ಪೊಲೀಸ್ ಸಿಬ್ಬಂದಿ, ವೈದ್ಯರು, ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ, ಪೌರಕಾರ್ಮಿಕರು, ತಾಲ್ಲೂಕು ಆಡಳಿತ ಹಾಗೂ ಅವಳಿ ತಾಲ್ಲೂಕಿನ ಚೆಕ್ ಪೋಸ್ಟ್‌ನಲ್ಲಿರುವ ಎಲ್ಲಾ ಸಿಬ್ಬಂದಿಗೆ ತಮ್ಮ ಮನೆಯಲ್ಲಿಯೇ ತಯಾರಿಸಿದ ಹೋಳಿಗೆ ಊಟವನ್ನು ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನೂರಾರು ಜನರಿಗೆ ಲಸಿಕೆ: ನಗರದ ಅಂಬೇಡ್ಕರ್ ಭವನದಲ್ಲಿರುವ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕರು, 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಹಂತದ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಖುದ್ದು ನಿಂತು ಕೊಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.