ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) 2025–26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಬಜೆಟ್ನಲ್ಲಿ ಅತಿಥಿ ಉಪನ್ಯಾಸಕರ ಗೌರವಧನ ₹2,000 ಹೆಚ್ಚಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ ₹2,000 ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ ₹1,000 ಹೆಚ್ಚಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
.Budget 2025: ಚಿತ್ರಮಂದಿರ ದರ ₹200 ನಿಗದಿ, ₹500 ಕೋಟಿ ವೆಚ್ಚದಲ್ಲಿ ಚಿತ್ರನಗರಿ.Budget: ರಾಜ್ಯ ಸಾರಿಗೆಗೆ 2,381 ಡೀಸೆಲ್ ಬಸ್, 716 ಇವಿ ಬಸ್ಗಳ ಸೇರ್ಪಡೆ.Karnataka Budget 2025 | ಪತ್ರಕರ್ತರ ಮಾಸಾಶನ ಹೆಚ್ಚಳ: ಸಿದ್ದರಾಮಯ್ಯ.Budget 2025: ಅರ್ಚಕರಿಗೆ ವಾರ್ಷಿಕ ತಸ್ತೀಕ್ ₹12,000 ಹೆಚ್ಚಿಸಿದ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.