ಹೊಸದುರ್ಗ: ಮೇ 8 ಮತ್ತು 9 ರಂದು ಬಾದಾಮಿ ಬನಶಂಕರಿ ಕ್ಷೇತ್ರದಲ್ಲಿ ನಡೆಯುವ ಅಖಿಲ ಭಾರತ ದೇವಾಂಗ ಜಾಗೃತಿ ಸಮಾವೇಶ ಹಾಗೂ ದೇವಾಂಗ ದಯಾನಂದಪುರಿ ಸ್ವಾಮೀಜಿ ಅವರ ಪಟ್ಟಾಭಿಷೇಕ ವಾರ್ಷಿಕೋತ್ಸವ ಸಮಾರಂಭದ ಸಿದ್ಧತೆ ಅಂಗವಾಗಿ ಭಾನುವಾರ ಹೊಸದುರ್ಗದ ಬನಶಂಕರಿ ದೇವಾಲಯದಲ್ಲಿ ಪೂರ್ವಭಾವಿ ಸಭೆ ನಡೆಯಿತು.

‘ಮೇ 8 ಮತ್ತು 9ರಂದು ನಡೆಯಲಿರುವ ಸಮಾರಂಭದಲ್ಲಿ 1 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದೆ. ಮರಿಸ್ವಾಮಿ ಮಾಡಬೇಕು ಎಂಬ ಉದ್ದೇಶದಿಂದ ಮೂವರಿಗೆ ವಿದ್ಯಾಭ್ಯಾಸ ಕೊಡಿಸಲಾಗುತ್ತಿದೆ’ ಎಂದು ಹಂಪಿ ಗಾಯತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ ತಿಳಿಸಿದರು.

‘1908 ರಲ್ಲಿಯೇ ಆಗಿನ ಮದ್ರಾಸ್ ಕೌನ್ಸಿಲರ್ ಬಾದಾಮಿಯಲ್ಲಿ ದೇವಾಂಗ ಸಮುದಾಯಕ್ಕೆ 40 ಎಕರೆ ಜಮೀನು ನೀಡಿದ್ದರು. ಸಂಘಟನೆಯ ಕೊರತೆಯಿಂದಾಗಿ ಆ ಜಮೀನು ಒತ್ತುವರಿಯಾಗಿದ್ದು, 36 ಎಕರೆ ಉಳಿದಿದೆ. ಎರಡು ದಿನದ ಸಮಾವೇಶಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಶಾಸಕರು ಆಗಮಿಸಲಿದ್ದಾರೆ. ರಾಜಕೀಯ ಇಚ್ಛಾಶಕ್ತಿ ತೋರಿಸಲು ಸಮುದಾಯದ ಶಕ್ತಿ ಪ್ರದರ್ಶಿಸಬೇಕಿದೆ’ ಎಂದು ಹೇಳಿದರು.

ದೇವಾಂಗ ಸಂಘದ ರಾಜ್ಯ ಘಟಕದ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಜಿಲ್ಲಾ ಘಟಕದ ಅಧ್ಯಕ್ಷ ಗೋ.ತಿಪ್ಪೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಗೋವಿಂದರಾಜು, ಜಿಲ್ಲಾ ಘಟಕದ ಗೌರವಾಧ್ಯಕ್ಷ ನಾಗೇಶಪ್ಪ, ಕಾರ್ಯದರ್ಶಿಗಳಾದ ಎಸ್.ಸುರೇಶ್, ಎಂ.ಆರ್.ಶಾಂತಪ್ಪ, ಬನಶಂಕರಿ ಬ್ಯಾಂಕ್ ಅಧ್ಯಕ್ಷ ಕಮಲ್ ರಾಮಚಂದ್ರಪ್ಪ, ಮುಖಂಡರಾದ ನಾರಾಯಣಸ್ವಾಮಿ, ರಂಗನಾಥ್, ಕಾಚಾಪುರ ರಂಗಪ್ಪ, ಎಸ್.ಸುರೇಶ್ ನೀರಗುಂದ, ಮೇಘಾ ರಾಮಚಂದ್ರ, ಶ್ರೀರಾಂಪುರ ರಮೇಶ್, ಅಸಂದಿ ಪ್ರಕಾಶ್ ಸೇರಿದಂತೆ ಹಲವರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-44-889358733

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.