ಬಳ್ಳಾರಿ ವಿಮಾನ ನಿಲ್ದಾಣ: ಸದ್ಯವೇ ಸಿ.ಎಂ ಸಭೆ

ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಶೀಘ್ರವೇ ಸಭೆ ಕರೆಯಲಾಗುವುದು. ಬಳ್ಳಾರಿ, ಹೊಸಪೇಟೆ, ಹಂಪಿ, ಆನೆಗೊಂದಿ, ಸಂಡೂರು, ಕೊಪ್ಪಳ, ಕುರುಗೋಡು, ಸಿರಗುಪ್ಪ ಮುಂತಾದ ಭಾಗಗಳಿಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣ ಇರಬೇಕೆಂಬುದು ಸರ್ಕಾರದ ಉದ್ದೇಶ. ಹೀಗಾಗಿ ಬಳ್ಳಾರಿಯಿಂದ 19 ಕಿ.ಮೀ. ದೂರದಲ್ಲಿ ಜಾಗವನ್ನು ಗುರುತಿಸಲಾಗಿದೆ. ಇದು ಕಾರ್ಯಸಾಧು ಎನಿಸಿದರೆ ಎಲ್ಲ ಜನಪ್ರತಿನಿಧಿಗಳ ಜತೆ ಚರ್ಚಿಸಿ ಮುಂದಿನ ಹೆಜ್ಜೆ ಇಡಲಾಗುವುದು. ಮುಖ್ಯಮಂತ್ರಿ ನೇತೃತ್ವದಲ್ಲಿ ಸದ್ಯವೇ ಸಭೆ ನಡೆಸಲಾಗುವುದು. ಅಲ್ಲದೇ, ಉಡಾನ್ ಯೋಜನೆಯ ರಿಯಾಯ್ತಿಗಳನ್ನು ಮೂರು ವರ್ಷಗಳ ಬದಲಿಗೆ ಐದು ವರ್ಷಗಳಿಗೆ ಮುಂದುವರಿಸಲು ಕೇಂದ್ರಕ್ಕೆ ಮನವಿ ಮಾಡುತ್ತೇವೆ.

- ಎಂ.ಬಿ.ಪಾಟೀಲ, ಕೈಗಾರಿಕಾ ಸಚಿವರ

ಪ್ರಶ್ನೆ: ಜಿ.ಜನಾರ್ದನ ರೆಡ್ಡಿ, ಬಿಜೆಪಿ

ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆಗೆ ₹800 ಕೋಟಿ

ಮೈಸೂರು ನಗರಕ್ಕೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗಾಗಿ ₹1,500 ಕೋಟಿ ಅನುದಾನಕ್ಕೆ ಮುಖ್ಯಮಂತ್ರಿಯವರನ್ನು ಕೋರಲಾಗಿತ್ತು. ಈಗ ₹750 ರಿಂದ ₹800 ಕೋಟಿ ಮೀಸಲಿಡಲಾಗುತ್ತಿದೆ. ಮೈಸೂರು ನಗರದ ವಿವಿಧ ಬಡಾವಣೆಗಳಲ್ಲಿ ಮಳೆ ನೀರು ಚರಂಡಿ ನಿರ್ಮಾಣ ಮಾಡಲಾಗಿದೆ. ಆದರೆ, ಕೆಲವು ಕಡೆ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಕಾರಣ ಈ ಕಾಮಗಾರಿಗೆ ₹27 ಕೋಟಿಗೆ ಮಹಾನಗರ ಪಾಲಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆರ್ಥಿಕ ಇಲಾಖೆ ಪ್ರಸ್ತಾವನೆ ತಿರಸ್ಕರಿಸಿತ್ತು. ಆ ಮೊತ್ತವನ್ನು ಹೊಂದಿಸಿ ಕೊಡುವ ಮೂಲಕ ಸಮಸ್ಯೆ ಬಗೆಹರಿಸುತ್ತೇವೆ. ನಗರದ ರಸ್ತೆಗಳಿಗೆ ವೈಟ್ ಟಾಪಿಂಗ್ ಯೋಜನೆಗಳಿಗಾಗಿ ₹300 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.

- ಬೈರತಿ ಸುರೇಶ, ನಗರಾಭಿವೃದ್ಧಿ ಸಚಿವ

ಪ್ರಶ್ನೆ: ಜಿ.ಟಿ.ದೇವೇಗೌಡ, ಜೆಡಿಎಸ್

ಇ–ತಂತ್ರಾಂಶದಲ್ಲಿ ದೋಷವಿಲ್ಲ

ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಏಕೀಕೃತ ಭೂನಿರ್ವಹಣೆ ವ್ಯವಸ್ಥೆ (ಯೂನಿಫೈಡ್ ಲ್ಯಾಂಡ್ ಮ್ಯಾನೇಜ್ಮೆಂಟ್ ಸಿಸ್ಟಂ) ಜಾರಿ ಬರಲಿದೆ. ಭೂದಾಖಲೆಗಳು, ಸಮೀಕ್ಷೆ, ಭೂಪರಿವರ್ತನೆ, ಆಸ್ತಿ ತೆರಿಗೆ, ಇ–ಖಾತಾ ಸೇವೆಗಳನ್ನು ಒಂದೇ ಕಡೆ ಲಭ್ಯವಾಗುವಂತೆ ಮಾಡುವ ಫ್ಲಾಟ್ ಫಾರ್ಮ್ ಇದಾಗಿದೆ. ಪೈಲಟ್ ಯೋಜನೆಯಡಿ ಸದ್ಯದಲ್ಲಿಯೇ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ ಜಾರಿ ತರಲಾಗುವುದು. ಇ-ತಂತ್ರಾಂಶದಲ್ಲಿ ಯಾವುದೇ ದೋಷಗಳು ಕಂಡು ಬಂದಿಲ್ಲ. ಒಂದು ವೇಳೆ ಸಮಸ್ಯೆ ಎದುರಾದರೆ ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ

- ಬೈರತಿ ಸುರೇಶ, ನಗರಾಭಿವೃದ್ಧಿ, ನಗರ ಯೋಜನೆ ಸಚಿವ

ಪ್ರಶ್ನೆ: ಜ್ಯೋತಿ ಗಣೇಶ್, ಬಿಜೆಪಿ

ಹೊಸಕೋಟೆಗೆ ಹೂವಿನ ಮಾರುಕಟ್ಟೆ

ಹೊಸಕೋಟೆಯಲ್ಲಿ ಪುಷ್ಪೋದ್ಯಮಕ್ಕೆ ಅನುಕೂಲವಾಗುವಂತೆ ಶೀತಲಗೃಹ ಮತ್ತು ಹೂವಿನ ಮಾರುಕಟ್ಟೆಯೊಂದನ್ನು ಆರಂಭಿಸುತ್ತೇವೆ. ಅಲ್ಲದೆ, ಚಿಕ್ಕಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವ್ಯಾಪ್ತಿಯಲ್ಲಿ 20 ಎಕರೆಯಲ್ಲಿ ₹20 ಕೋಟಿ ವೆಚ್ಚದಲ್ಲಿ ಆಧುನಿಕ ಸುಸಜ್ಜಿತ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುದಾನ ಮಂಜೂರಾಗಿದೆ. ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ.

- ಶಿವಾನಂದ ಪಾಟೀಲ, ಕೃಷಿ ಮಾರುಕಟ್ಟೆ ಸಚಿವ

ಪ್ರಶ್ನೆ: ಶರತ್ ಬಚ್ಚೇಗೌಡ, ಕಾಂಗ್ರೆಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.