ಬೆಂಗಳೂರು: ‘ಪ್ರತಿ ಜಿಲ್ಲೆಯಲ್ಲಿ ಮೂರು ವರ್ಷದ ಒಳಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆ ನಿರ್ಮಿಸಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ತಿಳಿಸಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಹುಬ್ಬಳ್ಳಿ ಮತ್ತು ಬೆಳಗಾವಿ ಭಾಗದಲ್ಲಿ ಶೀಘ್ರದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಶಾಖೆ ಆರಂಭಿಸಲಾಗುವುದು’ ಎಂದರು.

ಸೀಟ್ ಬ್ಲಾಕಿಂಗ್ ಇಲ್ಲ: ‘ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಶೇ 100ರಷ್ಟು ಪಾರದರ್ಶಕತೆ ಇದೆ. ಯಾವುದೇ ಸೀಟ್ ಬ್ಲಾಕಿಂಗ್ ಇಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೆರಿಟ್ ಆಧಾರದಲ್ಲಿ ವೈದ್ಯಕೀಯ ಸೀಟು ಹಂಚಿಕೆ ಮಾಡುತ್ತದೆ. 800 ವೈದ್ಯಕೀಯ ಸೀಟು ಹೆಚ್ಚಳಕ್ಕೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.

‘ರಾಜ್ಯದಾದ್ಯಂತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಮಾಡಲು ಆರಂಭಿಸಿದ್ದೇವೆ. ಕಲಬುರಗಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾರ್ಯಾರಂಭ ಆಗಿದೆ. ಜಯದೇವ ಆಸ್ಪತ್ರೆಯನ್ನು ಕಲಬುರಗಿಯಲ್ಲಿ ಉದ್ಘಾಟಿಸಿದ್ದೇವೆ. ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಇದೆ. ಹುಬ್ಬಳ್ಳಿಯಲ್ಲಿ ಮುಂದಿನ ವರ್ಷ 400 ಹಾಸಿಗೆಗಳ ಜಯದೇವ ಆಸ್ಪತ್ರೆ ಉದ್ಘಾಟಿಸಲಿದ್ದೇವೆ’ ಎಂದರು.

‘ಯುವ ನಿಧಿ ಗ್ಯಾರಂಟಿ ಯೋಜನೆಯಲ್ಲಿ 2.86 ಲಕ್ಷ ಮಂದಿ ನೋಂದಣಿಯಾಗಿದ್ದಾರೆ. ಈ ಯೋಜನೆಯನ್ನು ಇನ್ನಷ್ಟು ಸಮರ್ಪಕವಾಗಿ ಜಾರಿಗೆ ತರಲು ಕೆಲವು ಸುಧಾರಣೆಗಳನ್ನು ತರುತ್ತಿದ್ದೇವೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.