‘ತಮಿಳುನಾಡು ಸರ್ಕಾರವು 2 ಸಾವಿರ ಎಕರೆ ಪ್ರದೇಶದಲ್ಲಿ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಿದ್ದು, ವಾರ್ಷಿಕ 3 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿರಲಿದೆ. ಹೊಸ ನಿಲ್ದಾಣವು ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗಳ ಕೈಗಾರಿಕಾ ಅಗತ್ಯಗಳನ್ನು ಪೂರೈಸಲಿದೆ’ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇತ್ತೀಚೆಗೆ ಪ್ರಕಟಿಸಿದ್ದರು.