ಬೆಂಗಳೂರು: ‘ಸರ್ಕಾರ ಜಾರಿ ಮಾಡಿರುವ ವಾರಾಂತ್ಯ ಕರ್ಫ್ಯೂಗೆ ಹೋಟೆಲ್ ಮಾಲೀಕರ ಸಂಪೂರ್ಣ ವಿರೋಧವಿದೆ. ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ಪಾರ್ಸೆಲ್ ಸೇವೆ ಬದಲಿಗೆ ಶೇ 50ರಷ್ಟು ಪ್ರಮಾಣದಲ್ಲಿ ಸೇವೆ ನೀಡಲು ಅವಕಾಶ ಕಲ್ಪಿಸಬೇಕು’ ಎಂದು ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಅಧ್ಯಕ್ಷ ಚಂದ್ರಶೇಖರ ಹೆಬ್ಬಾರ್ ಮನವಿ ಮಾಡಿದ್ದಾರೆ.

‘ಹೋಟೆಲ್‌ಗಳಲ್ಲಿ ವಾರಾಂತ್ಯದ ದಿನಗಳಲ್ಲೇ ವ್ಯಾಪಾರ ಹೆಚ್ಚು. ಕೋವಿಡ್ ತೀವ್ರಗೊಂಡಿರುವ ಕಾರಣಕ್ಕೆಸೋಮವಾರದಿಂದ ಶುಕ್ರವಾರದವರೆಗೆ ಹೋಟೆಲ್‌ಗಳಲ್ಲಿ ಶೇ 50ರಷ್ಟು ಆಸನ ಸಾಮರ್ಥ್ಯದಲ್ಲಿ ಸೇವೆ ನೀಡಲಾಗುತ್ತಿದೆ. ಇದರಿಂದ ಹೋಟೆಲ್‌ಗಳಿಗೆ ಯಾವುದೇ ಲಾಭವಿಲ್ಲ. ಗ್ರಾಹಕರ ಹಿತದೃಷ್ಟಿಯಿಂದ ಸೇವೆ ಒದಗಿಸುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ.

‘ಸರ್ಕಾರದ ನಿರ್ಬಂಧಗಳಿಂದಾಗಿ ಈವರೆಗೆ ಬೆಂಗಳೂರಿನಲ್ಲಿ ಒಂದು ಸಾವಿರಕ್ಕೂ ಹೆಚ್ಚು ಹಾಗೂ ರಾಜ್ಯದಾದ್ಯಂತ 20 ಸಾವಿರಕ್ಕೂ ಹೆಚ್ಚು ಹೋಟೆಲ್‌ಗಳು ಬಾಗಿಲು ಮುಚ್ಚಿವೆ. ಕೋವಿಡ್ ನೆಪವೊಡ್ಡಿ ಹೋಟೆಲ್ ಉದ್ಯಮದ ಮೇಲೆಮತ್ತೆ ಗದಾಪ್ರಹಾರ ಮಾಡುವುದು ಸರಿಯಲ್ಲ’ ಎಂದು ದೂರಿದ್ದಾರೆ.

‘ಮೂರನೇ ಅಲೆಯು ಹೆಚ್ಚು ಮಾರಣಾಂತಿಕ ಅಲ್ಲ ಎಂದು ತಜ್ಞರು ಹೇಳಿದ್ದಾರೆ. ಆದರೂ ವಾರಾಂತ್ಯದಲ್ಲಿ ಕರ್ಫ್ಯೂ ಜಾರಿ ಹಾಗೂ ಹೋಟೆಲ್‌ಗಳಿಗೆ ನಿರ್ಬಂಧ ಹೇರಿರುವುದು ಅರ್ಥಹೀನ. ನೆಲಕಚ್ಚಲಿರುವ ಹೋಟೆಲ್ ಉದ್ಯಮದ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕು. ವಾರಾಂತ್ಯದಲ್ಲೂ ಶೇ 50ರಷ್ಟು ಆಸನ ವ್ಯವಸ್ಥೆಯೊಂದಿಗೆ ಸೇವೆ ಒದಗಿಸಲು ಅವಕಾಶ ನೀಡಲೇಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.