ನವದೆಹಲಿ: ‘ಸಾಮಾಜಿಕ ನ್ಯಾಯದ ಹೀರೋ ಎಂದು ತಮಗೆ ತಾವೇ ಬಿರುದು ಕೊಟ್ಟುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಪದೇ ಪದೇ ಟೀಕಿಸುತ್ತಿದ್ದಾರೆ. ತಮ್ಮ ಮುಖ್ಯಮಂತ್ರಿ ಸಚಿವಾಲಯದಲ್ಲಿ ಹಿಂದುಳಿದವರು ಹಾಗೂ ಕುರುಬರು ಎಷ್ಟಿದ್ದಾರೆ ಎಂಬುದರ ಬಗ್ಗೆ ಮೊದಲು ಉತ್ತರ ಕೊಡಲಿ’ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಸವಾಲು ಎಸೆದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದ ಜಾತಿಗಣತಿಗೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿಯೇ ಸಹಮತ ಇಲ್ಲ. ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ನಾನು ಪತ್ರ ಬರೆದಿದ್ದೆ. ನನಗೆ ಅವರು ಈವರೆಗೆ ಉತ್ತರ ಕೊಟ್ಟಿಲ್ಲ’ ಎಂದರು.

‘ಜಾತಿ ಸಮೀಕ್ಷೆಯ ಮೂಲಕ ತಾವು ಬೆಣ್ಣೆ ತಿಂದು, ಉಳಿದವರಿಗೆ ನೀರು ಮಜ್ಜಿಗೆ ಕೊಡಲು ಸಿದ್ದರಾಮಯ್ಯ ಹೊರಟಿದ್ದಾರೆ. ಇದು ಸರಿಯಲ್ಲ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ’ ಎಂದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮೋದಿ ಅವರ ನೇತೃತ್ವದಲ್ಲಿ ಕೈಗೊಳ್ಳುತ್ತಿರುವ ಎಲ್ಲ ಕ್ರಮಗಳನ್ನು ಮುಕ್ತಕಂಠದಿಂದ ಬೆಂಬಲಿಸುವುದಾಗಿ ಅವರು ಘೋಷಿಸಿದರು.

‘ಈ ಕೆಲಸ ಮಾಡಿದವರಿಗೆ ತಕ್ಕ ಶಾಸ್ತಿ ಆಗಲೇಬೇಕು. ರಕ್ಷಣಾ ಪಡೆಗಳಿಗೆ ಮೋದಿ ಅವರು ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ. ಮೊದಲ ಬಾರಿಗೆ ದೇಶದ ಪ್ರಧಾನಿಯೊಬ್ಬರು ಇಂತಹ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ’ ಎಂದರು.

‘1971ರ ಯುದ್ಧ ಕಾಲಕ್ಕೂ ಈಗಿನ ಪರಿಸ್ಥಿತಿಗೂ ಬಹಳ ವ್ಯತ್ಯಾಸವಿದೆ. ಹೋಲಿಕೆ ಮಾಡಲು ಸಾಧ್ಯವಿಲ್ಲ. ಭಾರತ ಅಗಾಧವಾಗಿ ಬೆಳೆದಿದೆ. ಕಳೆದ ಹತ್ತು ವರ್ಷಗಳಲ್ಲಿ ದೇಶವು ಸಾಕಷ್ಟು ಅಭಿವೃದ್ಧಿ, ಬದಲಾವಣೆಯನ್ನು ಕಂಡಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.