ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

HSRP For Old Vehicles: ಜೂನ್‌ 12ರವರೆಗೆ ಅವಕಾಶ

Published 30 ಮೇ 2024, 23:38 IST
Last Updated 30 ಮೇ 2024, 23:38 IST
ಅಕ್ಷರ ಗಾತ್ರ

ಬೆಂಗಳೂರು: ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ.

ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಮೇ 31ರವರೆಗೆ ವಿಧಿಸಲಾಗಿರುವ ಗಡುವನ್ನು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕಂಪನಿಯು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆಯು ಜೂನ್‌ 11ಕ್ಕೆ ನಿಗದಿಯಾಗಿದೆ ಎಂದು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಹೈಕೋರ್ಟ್‌ಗೆ ತಿಳಿಸಿದ್ದರು. ಹಾಗಾಗಿ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳದ ವಾಹನಗಳ ಮೇಲೆ ಜೂನ್‌ 12ರ ವರೆಗೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಸೂಚಿಸಿತ್ತು.

ಇದರಿಂದ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳುವವರಿಗೆ ಹೆಚ್ಚುವರಿಯಾಗಿ 12 ದಿನಗಳ ಅವಕಾಶ ಸಿಕ್ಕಿದೆ. ಈ ಸಮಯವನ್ನು ಬಳಸಿಕೊಳ್ಳಬೇಕು. ಜೂನ್‌ 12ರ ನಂತರ ಅವಧಿ ವಿಸ್ತರಣೆ ಅಥವಾ ಇನ್ಯಾವುದೇ ಕ್ರಮಗಳ ಬಗ್ಗೆ ಹೈಕೋರ್ಟ್‌ ಆದೇಶ ಮತ್ತು ಸರ್ಕಾರದ ನಿರ್ಧಾರಗಳನ್ನು ಅವಲಂಬಿಸಿದೆ ಎಂದು ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ ತಿಳಿಸಿದ್ದಾರೆ.

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT