ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಜಲಿ ಹತ್ಯೆ ಪ್ರಕರಣ: ಸಿಐಡಿ ಅಧಿಕಾರಿಗಳಿಂದ ಸ್ಥಳ ಮಹಜರು

Published 24 ಮೇ 2024, 8:33 IST
Last Updated 24 ಮೇ 2024, 8:33 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು, ಆರೋಪಿ ಗಿರೀಶ ಸಾವಂತನನ್ನು ಕರೆತಂದು ಶುಕ್ರವಾರ ಸ್ಥಳ ಮಹಜರು ನಡೆಸಿದರು.

ನಗರದ ವೀರಾಪೂರ ಓಣಿಯಲ್ಲಿರುವ ಮನೆಯಲ್ಲಿ ಅಂಜಲಿ ಹತ್ಯೆ ನಡೆದಿತ್ತು. ಆರೋಪಿಯನ್ನು ಸ್ಥಳಕ್ಕೆ ಕರೆತಂದ ಸಿಐಡಿ ಅಧಿಕಾರಿಗಳು ಘಟನಾ ಸ್ಥಳ ಹಾಗೂ ಸುತ್ತಲಿನ ಪ್ರದೇಶ ಪರಿಶೀಲಿಸಿದರು. ಆರೋಪಿಯಿಂದ ಅಗತ್ಯ ಮಾಹಿತಿ ಪಡೆದರು. ಈ ವೇಳೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ಸಿಐಡಿ ಎಸ್.ಪಿ. ವೆಂಕಟೇಶ್ ನೇತೃತ್ವದ ಅಧಿಕಾರಿಗಳ ತಂಡ ಪ್ರಕರಣದ ತನಿಖೆ ನಡೆಸುತ್ತಿದೆ. ಆರೋಪಿಯನ್ನು ಎಂಟು ದಿನ ಸಿಐಡಿ ಕಸ್ಟಡಿಗೆ ನೀಡಿ ಇಲ್ಲಿನ ಜೆಎಂಎಫ್ ನ್ಯಾಯಾಲಯ ಗುರುವಾರ ಆದೇಶಿಸಿತ್ತು. ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT