ಹುಬ್ಬಳ್ಳಿ: ಯಾವುದೇ ಚರ್ಚೆ ನಡೆಸದೆ, ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವ ನಿರ್ಣಯಕ್ಕೆ ಗುರುವಾರ ಇಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಚರ್ಚೆಗೆ ಅವಕಾಶ ಕೊಡದೆ ಮೇಯರ್ ಠರಾವು ಪಾಸು ಮಾಡಿದರು. ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಸದಸ್ಯರು, ಮೇಯರ್ ಮತ್ತು ಸಭಾನಾಯಕರ ವಿರುದ್ಧ ಧಿಕ್ಕಾರ ಕೂಗಿದರು. ‘ಪ್ರತ್ಯೇಕ ಮಹಾನಗರ ಪಾಲಿಕೆ ಆಗಲೇಬೇಕು’ ಎಂದು ಘೋಷಣೆ ಕೂಗಿದ ಕಾಂಗ್ರೆಸ್ ಸದಸ್ಯರು, ಸಭೆಯ ವಿಷಯ ಪಟ್ಟಿ ಪ್ರತಿ ಹರಿದು ಆಕ್ರೋಶ ವ್ಯಕ್ತಪಡಿಸಿದರು.

ಪಾಲಿಕೆ ವಿರೋಧ ಪಕ್ಷದ ನಾಯಕ ಇಮ್ರಾನ್ ಯಲಿಗಾರ ಅವರು, ‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಯಾಗುತ್ತಿದೆ ಎಂಬುದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ, ಪ್ರತ್ಯೇಕ ಮಹಾನಗರ ಪಾಲಿಕೆ ಬೇಡ; ಬೃಹತ್ ಮಹಾನಗರ ಪಾಲಿಕೆಯಾಗಬೇಕೆಂದು ಠರಾವು ಪಾಸು ಮಾಡಿದ್ದಾರೆ’ ಎಂದರು.

‘ಪ್ರತ್ಯೇಕ ಮಹಾನಗರ ಪಾಲಿಕೆ ಆಗಬೇಕೆಂದು ಈ ಹಿಂದೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ, ನಿರ್ಣಯ ಕೈಗೊಳ್ಳಲಾಗಿತ್ತು. ಕಾಂಗ್ರೆಸ್, ಬಿಜೆಪಿ ಶಾಸಕರು ಅಧಿವೇಶನದಲ್ಲಿಯೂ ಈ ಬಗ್ಗೆ ಒತ್ತಾಯಿಸಿದ್ದರು. ಆದರೆ, ಕ್ರೆಡಿಟ್ಗಾಗಿ ಬಿಜೆಪಿಯವರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಧಾರವಾಡದವರೇ ಆದ ಮೇಯರ್, ಸಭಾನಾಯಕರು ಧಾರವಾಡಕ್ಕೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಹೆಚ್ಚು ಅನುದಾನ ಬರುತ್ತದೆ ಎಂಬ ಕಾರಣಕ್ಕೆ ಬೃಹತ್ ಮಹಾನಗರ ಪಾಲಿಕೆಯಾಗಬೇಕೆಂದು ಹೇಳುತ್ತಿದ್ದಾರೆ. ಆದರೆ, ಹೆಚ್ಚು ಅನುದಾನ ಬರುವುದಿಲ್ಲ. 2011ರ ಜನಗಣತಿಯಂತೆ ಬೃಹತ್ ಮಹಾನಗರ ಪಾಲಿಕೆಯಾಗಲು ಅರ್ಹತೆ ಇಲ್ಲ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ ಅವರಿಗೆ ಧಾರವಾಡ ಅಭಿವೃದ್ಧಿಯಾಗುವುದು ಬೇಕಿಲ್ಲವೇ’ ಎಂದು ಪ್ರಶ್ನಿಸಿದರು.

ಮೇಯರ್ ಜ್ಯೋತಿ ಪಾಟೀಲ ಮಾತನಾಡಿ, ‘ಹುಬ್ಬಳ್ಳಿ –ಧಾರವಾಡ ಮಹಾನಗರ ಪಾಲಿಕೆಯು ಬೃಹತ್ ಮಹಾನಗರ ಪಾಲಿಕೆಯಾದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹೆಚ್ಚು ಅನುದಾನ ಬರಲಿದೆ. ಅವಳಿ ನಗರಗಳ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಈ ಠರಾವು ಪಾಸು ಮಾಡಲಾಗಿದೆ. ಇದರಲ್ಲಿ ರಾಜಕೀಯ ಲಾಭದ ಉದ್ದೇಶ ಇಲ್ಲ’ ಎಂದು ಸಮರ್ಥಿಸಿಕೊಂಡರು.

‘10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ನಗರಗಳಿಗೆ ಕೇಂದ್ರ ಸರ್ಕಾರದಿಂದ ಅನುದಾನ ಬರುತ್ತದೆ. ಧಾರವಾಡ ಪ್ರತ್ಯೇಕ ಪಾಲಿಕೆಯಾದರೆ, ಹುಬ್ಬಳ್ಳಿ–ಧಾರವಾಡಕ್ಕೆ ಈ ಅನುದಾನ ಪಡೆಯಲು ಸಾಧ್ಯವಾಗುವುದಿಲ್ಲ’ ಎಂದರು.

‘ಯಾವುದೇ ನಗರ, ಸ್ಥಳೀಯ ಸಂಸ್ಥೆ ಗಟ್ಟಿಯಾಗಲು ಅನುದಾನ ಅಗತ್ಯ ಇದೆ. ರಾಜ್ಯ ಸರ್ಕಾರದಿಂದ ಪಾಲಿಕೆಗೆ ನೂರಾರು ಕೋಟಿ ಅನುದಾನ ಬರುವುದು ಬಾಕಿ ಇದೆ. ನ್ಯಾಯಯುತವಾಗಿ ಪಾಲಿಕೆಗೆ ಬರಬೇಕಾದ ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಸ್ಪಂದಿಸಿಲ್ಲ’ ಎಂದು ದೂರಿದರು.

‘ಬೆಂಗಳೂರಿನಲ್ಲಿ ಬಿಬಿಎಂಪಿಯನ್ನು ತಮ್ಮ ಅನುಕೂಲಕ್ಕಾಗಿ ಕಾಂಗ್ರೆಸ್ನವರು ವಿಭಜನೆ ಮಾಡಿದರು. ಆದರೆ, ಮಹಿಳೆಯರಿಗೆ ಅವಕಾಶ ನೀಡಲು ಕ್ಷೇತ್ರ ಪುನರ್ ವಿಂಗಡಣೆ ಮಾಡಿ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-24-572631241

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.