ನವದೆಹಲಿ: ಹುಬ್ಬಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿ ಮಂದಗತಿಯಲ್ಲಿ ಸಾಗಿರುವ ಫ್ಲೈ ಓವರ್ ಕಾಮಗಾರಿ ಪ್ರಗತಿ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.

ನಗರದ ಹೃದಯ ಭಾಗದಲ್ಲಿ ನಿರ್ಮಿಸುತ್ತಿರುವ 3.61 ಕಿ.ಮೀ.ಯ ಎಲಿವೇಟೆಡ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅಗತ್ಯ ಅನುದಾನ ನೀಡುತ್ತಿದ್ದರೂ ಕಾಮಗಾರಿ ವಿಳಂಬವಾಗಿದೆ ಎಂದು ಗಡ್ಕರಿ ಅಸಮಾಧಾನ ವ್ಯಕ್ತಪಡಿಸಿದರು.

ಕಾಮಗಾರಿ ಇನ್ನೂ ಅರ್ಧದಷ್ಟೂ ಪೂರ್ಣಗೊಂಡಿಲ್ಲ. ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ತೋರಿದ ವಿಳಂಬ ನೀತಿಯೇ ಕಾರಣ ಎಂದು ಸಚಿವರಿಬ್ಬರೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಈ ಕಾಮಗಾರಿಗೆ ಆರಂಭದಲ್ಲಿ ₹196.99 ಕೋಟಿ ನಿಗದಿಪಡಿಸಲಾಗಿತ್ತು. ಬಳಿಕ ಯೋಜನಾ ವೆಚ್ಚ ₹298 ಕೋಟಿಗೆ ಏರಿತ್ತು. ಈಗ ₹51.49 ಕೋಟಿ ಹೆಚ್ಚುವರಿ ಅನುದಾನ ನೀಡಲು ಗಡ್ಕರಿ ಸಮ್ಮತಿಸಿದ್ದಾರೆ. ಹೆದ್ದಾರಿ ಸಚಿವಾಲಯದ ಮೂಲಕ ವಿಶೇಷ ಹಣಕಾಸು ನೆರವು ನೀಡುವುದಾಗಿ ಭರವಸೆ ನೀಡಿದರು. ಕೂಡಲೇ ಕಾಮಗಾರಿಗೆ ವೇಗ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.