ಹುಬ್ಬಳ್ಳಿ: ‘ಇಂಧನ ವಿಷಯದಲ್ಲಿ ಇಡೀ ಜಗತ್ತಿನಲ್ಲಿ ಸಮಸ್ಯೆ ಎದುರಾಗಿದೆ. ಆದರೆ, ದೇಶದಲ್ಲಿ ಯಾವುದೇ ಸಮಸ್ಯೆ ಆಗದಂತೆ ಕೇಂದ್ರ ಸರ್ಕಾರ ಎಚ್ಚರಿಕೆ ವಹಿಸಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಮತ್ತು ಎಲ್ಪಿಜಿ ದರ ಏರಿಕೆಯಾದರೂ ಕೇಂದ್ರ ಸರ್ಕಾರವು ಅದನ್ನು ಭರಿಸಿ, ಜನರಿಗೆ ಅನುಕೂಲ ಮಾಡಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

‘ಶಕ್ತಿಯ ಮೂಲಗಳ ನಿರ್ವಹಣೆ ವಿಷಯದಲ್ಲಿ ದೇಶದಲ್ಲಿ ಸಾಕಷ್ಟು ಪರ್ಯಾಯ ಕ್ರಮ ಕೈಗೊಳ್ಳಲಾಗಿದೆ. ವಿದೇಶಿ ವಿನಿಮಯದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆಯನ್ನು ದೇಶದ ಜನರು ಪಾಲಿಸುವರು ಎಂಬ ವಿಶ್ವಾಸವಿದೆ’ ಇದೆ‘ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ನಾನು ಇಂಧನ ಸಮಿತಿಯ ಸದಸ್ಯನಾಗಿದ್ದು, ಕಚ್ಚಾತೈಲ ಮತ್ತು ಎಲ್ಪಿಜಿಗೆ ಸಂಬಂಧಿಸಿದ ವಾಸ್ತವ ಸಮಸ್ಯೆ ಗೊತ್ತಿದೆ. ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ತಲೆದೋರಿದರೂ ಅದನ್ನು ದೇಶವು ಸಮರ್ಥವಾಗಿ ಎದುರಿಸುತ್ತದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-51-244294664

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.