ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿ ಹತ್ಯೆ; ಆರೋಪಿ ರಕ್ಷಣೆ: ಜೆಡಿಎಸ್‌ ಆರೋಪ

Published 19 ಏಪ್ರಿಲ್ 2024, 16:07 IST
Last Updated 19 ಏಪ್ರಿಲ್ 2024, 16:07 IST
ಅಕ್ಷರ ಗಾತ್ರ

ಬೆಂಗಳೂರು: ಪ್ರೀತಿ ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ರಕ್ಷಣೆ ಮಾಡಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ ಎಂದು ಜೆಡಿಎಸ್‌ ಆರೋಪಿಸಿದೆ.

ಈ ಕುರಿತು ‘ಎಕ್ಸ್’ನಲ್ಲಿ ಹೇಳಿಕೆ ನೀಡಿರುವ ಪಕ್ಷ, ಈ ಘಟನೆ ಆಘಾತಕಾರಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ. ಕಾಂಗ್ರೆಸ್‌ನ ಅತಿಯಾದ ತುಷ್ಟೀಕರಣದಿಂದ ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮು ಸಿಕ್ಕಂತೆ ಆಗಿದೆ. ಕೆಲವರಿಗೆ ಈ ನೆಲದ ಕಾನೂನು ಅನ್ವಯ ಆಗುತ್ತಿಲ್ಲ ಎಂಬ ಅನುಮಾನ ಕಾಡುತ್ತಿದೆ ಎಂದು ಟೀಕಿಸಿದೆ.

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಜೀವ ತೆಗೆದ ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT