ಹುಬ್ಬಳ್ಳಿ: ಇಲ್ಲಿನ ಸಿದ್ಧಾರೂಢ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ 4ರಲ್ಲಿ ನಿಂತಿದ್ದ ಗುಂಟಗಲ್-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಬೋಗಿಯೊಂದರಲ್ಲಿ ಅಂದಾಜು 45 ವರ್ಷದ ವ್ಯಕ್ತಿಯೊಬ್ಬರ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ.

ಮಾರಕಾಸ್ತ್ರಗಳಿಂದ ಅವರನ್ನು ಕೊಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರುವಾರ ತಡರಾತ್ರಿ 1.10ರ ವೇಳೆಗೆ ಗುಂಟಕಲ್'ನಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ರೈಲು ಬಂದಿದೆ. 1.30ರ ವೇಳೆ ಸ್ವಚ್ಛತಾ ಕಾರ್ಮಿಕರು ಬೋಗಿಯನ್ನು ಶುಚಿಗೊಳಿಸಲು ತೆರಳಿದಾಗ ವ್ಯಕ್ತಿ ಹತ್ಯೆಯಾಗಿದ್ದು ತಿಳಿದು ಬಂದಿದೆ. ಪ್ರಯಾಣಿಕರೆಲ್ಲ ಇಳಿದು ಹೋದ ಮೇಲೆ ಅವರನ್ನು ಕೊಲೆ ಮಾಡಿರುವ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ. ಶ್ವಾನದಳ ಸಿಬ್ಬಂದಿ ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ.

'ಪ್ಲಾಟ್ ಫಾರ್ಮ್ 4ರಲ್ಲಿ ಅಳವಡಿಸಿದ ಹಾಗೂ ಸುತ್ತಮುತ್ತಲಿನ ಸಿಸಿಟಿಟಿವಿ ಕ್ಯಾಮೆರಾ ಪರಿಶೀಲನೆ ಮಾಡಲಾಗುತ್ತದೆ. ಅಲ್ಲದೆ, ಹುಬ್ಬಳ್ಳಿ ಬರುವ ಪೂರ್ವ ಹಿಂದಿನ ನಿಲ್ದಾಣಗಳಲ್ಲಿ ಟಿಕೆಟ್ ಪಡೆದವರ ಮಾಹಿತಿ ಮತ್ತು ಅಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಸಹ ಸಂಗ್ರಹಿಸಲಾಗುತ್ತಿದೆ' ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.