ಹುಬ್ಬಳ್ಳಿ: ‘ವೀರಶೈವ, ಲಿಂಗಾಯತ ಒಂದೇ. ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಕೆಲವರು ಸಮಾಜವನ್ನು ಒಡೆಯಲು ಹೊರಟಿದ್ದಾರೆ. ಈ ಬಗ್ಗೆ ಎಚ್ಚರದಿಂದ ಇರಬೇಕು’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.

ವೀರಶೈವ ಲಿಂಗಾಯತ ಸೇವಾ ಸಮಿತಿಯಿಂದ ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಭವನದಲ್ಲಿ ಭಾನುವಾರ ಏರ್ಪಡಿಸಿದ್ದ ವೀರಶೈವ ಲಿಂಗಾಯತ ಎಲ್ಲ ಒಳಪಂಗಡಗಳ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸಮಾಜ ಸೇರ್ಪಡೆಯಾದರೆ ಸಮಾಜದ ಮಕ್ಕಳಿಗೆ ಸಾಕಷ್ಟು ಸೌಲಭ್ಯಗಳು ಸಿಗಲಿವೆ. ಈ ನಿಟ್ಟಿನಲ್ಲಿ ರಾಜ್ಯ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಆಗಬೇಕು’ ಎಂದರು.

‘ಒಗ್ಗಟ್ಟು ಒಡೆಯುವ ಮೂಲಕ ಸಮಾಜದ ಮುಖಂಡರನ್ನು ಮುಗಿಸುವ ಕೆಲಸವಾಗುತ್ತಿದೆ. ಈ ಬಗ್ಗೆ ಜಾಗರೂಕರಾಗಿರಬೇಕು. ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಮಾಜದವರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಬಗ್ಗೆ ಚಿಂತನೆ ನಡೆಸಬೇಕು’ ಎಂದರು.

‘ಬಸವಣ್ಣನವರು ವೀರಶೈವ ಲಿಂಗಾಯತ ಸಮಾಜದ ಆದರ್ಶಪ್ರಾಯವಾಗಿದ್ದಾರೆ. ಅವರ ವಚನಗಳು ಇಂದಿಗೂ ಪ್ರಸ್ತುತ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರನ್ನು ಮುನ್ನೆಲೆಗೆ ತರುವ ಕೆಲಸವಾಗಬೇಕು’ ಎಂದು ಹೇಳಿದರು.

ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ‘ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ವೀರಶೈವ ಲಿಂಗಾಯತ ಸಮಾಜ ಸಾಗುತ್ತಿದೆ. ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಉತ್ತಮವಾಗಿ ಅಭ್ಯಾಸ ಮಾಡಿ, ಉನ್ನತ ಸ್ಥಾನಕ್ಕೇರಬೇಕು. ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರಿಯಬೇಕು’ ಎಂದರು.

ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ದೀಪಾ ಗೌರಿ, ತಾರಾದೇವಿ ವಾಲಿ, ಗಿರೀಶ ಪಟ್ಟಣಶೆಟ್ಟಿ, ಎಸ್.ಎಂ.ಶಿವಳ್ಳಿಮಠ, ಮಲ್ಲಿಕಾರ್ಜುನ ರಡ್ಡೇರ, ಶಂಕರ ಕೋಳಿವಾಡ ಇದ್ದರು.

ವೀರಶೈವ ಲಿಂಗಾಯತ ಸೇವಾ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಸಾವುಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಕಾಶ ಬೆಂಡಿಗೇರಿ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-20-2033773135

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.